Tuesday, January 7, 2025
Homeರಾಜಕೀಯ | Politicsಬಸ್ ದರ ಏರಿಕೆ ಖಂಡಿಸಿ ಬಿಜೆಪಿಗರ ಪ್ರತಿಭಟನೆಗೆ ಪೊಲೀಸರ ಅಡ್ಡಿ, ರೊಚ್ಚಿಗೆದ್ದ ಆರ್.ಅಶೋಕ್

ಬಸ್ ದರ ಏರಿಕೆ ಖಂಡಿಸಿ ಬಿಜೆಪಿಗರ ಪ್ರತಿಭಟನೆಗೆ ಪೊಲೀಸರ ಅಡ್ಡಿ, ರೊಚ್ಚಿಗೆದ್ದ ಆರ್.ಅಶೋಕ್

Police obstruct BJP protest against bus fare hike, R. Ashok get angry

ಬೆಂಗಳೂರು,ಜ.3– ಬಸ್ ದರ ಏರಿಕೆ ಮಾಡಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ನಾಯಕರಿಗೆ ಪೊಲೀಸರು ಅಡ್ಡಿಪಡಿಸಿದ ಪ್ರಸಂಗ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ನಡೆಯಿತು. ಪೊಲೀಸರ ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ .ಅಶೋಕ್ ಅಕ್ಷರಶಃ ಸಹನೆ ಕಳೆದುಕೊಂಡು ಅವರ ವಿರುದ್ಧವೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆಯೂ ಜರುಗಿತು.

ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದ ಪದಾಧಿಕಾರಿಗಳ ನೇತೃತ್ವದಲ್ಲಿ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಹಮಿಕೊಳ್ಳಲಾಗಿತ್ತು. ಬೆಳಗ್ಗೆ 11.30ಕ್ಕೆ ಮೆಜೆಸ್ಟಿಕ್ನಲ್ಲಿ ಅಶೋಕ್ ಅವರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಪೊಲೀಸರು ಅಡ್ಡಿಪಡಿಸಿ ನಾವು ಅವಕಾಶ ಕೊಡುವುದಿಲ್ಲ ಎಂದು ಅಡ್ಡಿಪಡಿಸಿದರು.

ಸಾಮಾನ್ಯವಾಗಿ ಎಂದೂ ಸಹನೆ ಕಳೆದುಕೊಳ್ಳದೆ ಇನ್ನೊಬ್ಬರ ವಿರುದ್ಧ ರೇಗಾಡದ ಅಶೋಕ್, ಪೊಲೀಸರು ಪ್ರತಿಭಟನೆಗೆ ತಡೆ ಹಾಕಿದ್ದರಿಂದ ರೌದ್ರಾವತಾರ ತಾಳಿದರು. ಒಂದು ಹಂತದಲ್ಲಿ ಪೊಲೀಸರು ಬಂಧಿಸಲು ಮುಂದಾದಾಗ ಸಹನೆ ಕಳೆದುಕೊಂಡ ಅವರು, ತಾಕತ್ತಿದ್ದರೆ ನಮನ್ನು ಬಂಧಿಸಿ ನಾನು ಕೂಡ ರಾಜ್ಯದ ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಾವೇನು ಪ್ರಯಾಣಿಕರಿಗೆ ಅಡ್ಡಿಪಡಿಸಿಲ್ಲ ಎಂದು ತಮ ಪ್ರತಿಭಟನೆಯನ್ನು ಸಮರ್ಥನೆ ಮಾಡಿಕೊಳ್ಳಲು ಮುಂದಾದರು.

ನೀವು ಮುಟ್ಟಿ ನೋಡಿ. ಇಲ್ಲಿ ಯಾರಿಗೂ ತೊಂದರೆ ಕೊಡುವಂತಿಲ್ಲ. ಪ್ರತಿಭಟನೆ ನಡೆಸುವುದು ನಮ ಹಕ್ಕು. ಆದರೆ ಇಲ್ಲಿ ನಾವು ಪ್ರತಿಭಟನೆ ಮಾಡುತ್ತಿಲ್ಲ. ಜನರಿಗೆ ಹೂವು ನೀಡುತ್ತಿದ್ದೇವೆ. ಅದಕ್ಕೂ ಅಡ್ಡಿಪಡಿಸಿದರೆ ನಿಮ ಮೇಲೆ ಕೇಸ್ ಹಾಕಿ ಕೋರ್ಟ್ನಲ್ಲಿ ನಿಲ್ಲಿಸಿ ಜೈಲಿಗೆ ಕಳುಹಿಸಬೇಕಾಗುತ್ತದೆ ಹುಷಾರ್! ಎಂದು ಎಚ್ಚರಿಸಿದರು.

ನೀವೇನು ಇಲ್ಲಿಯೇ ಇರುವುದಿಲ್ಲ. ನಾವು ಅಧಿಕಾರಕ್ಕೆ ಬಂದರೆ ಸುಮನೆ ಬಿಡುವುದಿಲ್ಲ. ನಮಗೂ ರಾಜಕಾರಣ ಮಾಡಲು ಬರುತ್ತದೆ. ಪ್ರತಿಭಟನೆ ನಡೆಸುವುದು ನಮ ಹಕ್ಕು. ನಾವು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿಯನ್ನು ಕೊಟ್ಟಿದ್ದೇವೆ. ಈಗ ಯಾವ ನಿರ್ದೇಶನದ ಮೇರೆಗೆ ಅಡ್ಡಿಪಡಿಸುತ್ತಿದ್ದೀರಿ ಎಂದು ಅಶೋಕ್ ತರಾಟೆಗೆ ತೆಗೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ 7 ಕೋಟಿ ಜನರು ಹೊಸ ವರ್ಷಕ್ಕೆ ಉಡುಗೊರೆಗೆ ಕಾಯುತ್ತಿದ್ದೆವು. ಮೋದಿಯವರು ಹೊಸ ವರ್ಷಕ್ಕೆ ನಿಜವಾದ ಗಿಫ್‌್ಟ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ, ದಿ ಗ್ರೇಟ್ 14 ಬಜೆಟ್ ಚಾಂಪಿಯನ್ ಸಿದ್ದರಾಮಯ್ಯನವರು ಬಸ್ ದರ ಏರಿಕೆಯ ಉಡುಗೊರೆ ನೀಡಿದ್ದಾರೆ ಎಂದು ಟೀಕಿಸಿದರು.

ಈ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರತಿದಿನ ತೆರಿಗೆ ಹೆಚ್ಚಳ, ಟ್ಯಾಕ್ಸ್ ಏರಿಕೆಯದೇ ಸಾಧನೆ ಮಾಡುತ್ತಿದೆ. ರಾಜ್ಯ ಸರಕಾರವು ಅಭಿವೃದ್ಧಿ ವಿಚಾರದಲ್ಲಿ ಶೂನ್ಯ ಸಾಧನೆ ಮಾಡಿದೆ. ಆದರೆ, ಬೆಲೆ ಏರಿಕೆ ನಿರಂತರವಾಗಿ ಸಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಹೆಣಕ್ಕಳಿಗೆ ಉಚಿತ ಪ್ರಯಾಣದರ ನೀಡಿ, ಗಂಡಸರಿಗೆ ಬರೆ ಹಾಕುವ ಸರಕಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಗ್ಯಾರಂಟಿ ಕಾರಣಗಳಿಂದ ಇವತ್ತು ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಿದ್ದೀರಿ. ವಿದ್ಯುತ್ ದರ ಏರಿಕೆ ಮಾಡಿದ್ದೀರಿ. ಸ್ಟಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಖಂಡಿಸಿದರು.ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರಕಾರ ಇದಾಗಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ದಿನ ದೂಡಲು ಬರೆ ಹಾಕುವ ಕೆಲಸ ಮಾಡಿದ್ದಾರೆ.

ಮೂರನೇ ದಿನಕ್ಕೆ ಮೂರು ನಾಮ ಹಾಕುವ ಕೆಲಸವನ್ನು ಸರಕಾರ ಮಾಡಿದೆ ಎಂದು ಟೀಕಿಸಿದರು.ಪ್ರತಿಭಟನೆಯಲ್ಲಿ ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯವರ ಮುಖವಾಡ ಧರಿಸಿದ್ದರು. ಪುರುಷ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಲಾಯಿತು.

RELATED ARTICLES

Latest News