Friday, January 10, 2025
Homeಬೆಂಗಳೂರುಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ, ಪೊಲೀಸ್ ಠಾಣೆಗಳ ಉದ್ಘಾಟನೆ

ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಮಿಂಚಿನ ಸಂಚಾರ, ಪೊಲೀಸ್ ಠಾಣೆಗಳ ಉದ್ಘಾಟನೆ

CM Siddaramaiah inaugurates police stations in Bengaluru

ಬೆಂಗಳೂರು,ಜ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರದಲ್ಲಿ ಮಿಂಚಿನ ಸಂಚಾರ ನಡೆಸಿ ಮೂರು ಪೊಲೀಸ್ ಠಾಣೆಯ ನೂತನ ಕಟ್ಟಡಗಳು, ಡಿಸಿಪಿ ಮತ್ತು ಎಸಿಪಿ ಕಚೇರಿಗಳು ಹಾಗೂ ಒಂದು ಪೊಲೀಸ್ ವಸತಿಗೃಹವನ್ನು ಉದ್ಘಾಟಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಇಂಧನ ಸಚಿವ ಕೆ.ಜೆ.ಜಾರ್ಜ್, ವಸತಿ ಸಚಿವ ಜಮೀರ್ ಅಹಮದ್ ಖಾನ್, ಶಾಸಕರಾದ ಎ.ಎಸ್.ಪೊನ್ನಣ್ಣ, ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

ಬೆಳಗ್ಗೆ ಚಾಮರಾಜಪೇಟೆಗೆ ಭೇಟಿ ನೀಡಿದ ಮುಖ್ಯಮಂತ್ರಿಯವರು ಅಲ್ಲಿ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾದ ಚಾಮರಾಜಪೇಟೆ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಅನಂತರ ಕಸ್ತೂರಿಬಾ ರಸ್ತೆಯಲ್ಲಿ ನಿರ್ಮಿಸಲಾಗಿರುವ ಕೇಂದ್ರ ವಿಭಾಗದ ಡಿಸಿಪಿ ಕಚೇರಿ ಹಾಗೂ ಕಬ್ಬನ್ಪಾರ್ಕ್ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ, ವಸಂತನಗರದ ಮಿಲ್ಲರ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಶೇಷಾದ್ರಿಪುರಂ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ, ಹೈಗ್ರೌಂಡ್‌್ಸ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಠಾಣೆ, ಹೈಗ್ರೌಂಡ್‌್ಸ ಸಂಚಾರಿ ಪೊಲೀಸ್ ಠಾಣೆ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿದರು.

ಪುಲಕೇಶಿ ನಗರದ ಲಾಜರ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ನೂತನ ಪೊಲೀಸ್ ವಸತಿಗೃಹಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿಯವರು ಇದೇ ವೇಳೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದಿಂದ ಪೊಲೀಸ್ ಇಲಾಖೆಯ ಸೇವೆಗಳ ಸುಧಾರಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.

ಚಾಮರಾಜಪೇಟೆಗೆ ಭೇಟಿ ನೀಡಿದ ವೇಳೆ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ಗೌರವವಂದನೆ ಸಲ್ಲಿಸಿದರು. ಇದೇ ವೇಳೆ ಪೊಲೀಸ್ ಠಾಣೆಯನ್ನು ಟೇಪ್ ಕತ್ತರಿಸಿ ಉದ್ಘಾಟಿಸಿದ ಮುಖ್ಯಮಂತ್ರಿಯವರು ಪುಷ್ಪಾರ್ಚನೆ ಮಾಡಿ ಒಳಪ್ರವೇಶಿಸುವಾಗ ಬಲಗಾಲಿಟ್ಟೇ ಒಳಗೆ ಹೋಗಬೇಕಲ್ಲವೇ ಎಂದು ಡಿ.ಕೆ.ಶಿವಕುಮಾರ್ ಹಾಗೂ ಪರಮೇಶ್ವರ್ ಬಳಿ ಹಾಸ್ಯಚಟಾಕಿ ಹಾರಿಸಿದರು. ಠಾಣೆಗಳ ಲಾಕಪ್ಗಳನ್ನು ವೀಕ್ಷಿಸಿದರು. ಪೊಲೀಸ್ ಠಾಣೆಯ ಹಳೆಯ ಕಟ್ಟಡ ಹಾಗೂ ಹೊಸ ಕಟ್ಟಡದ ಭಾವಚಿತ್ರಗಳನ್ನು ತೋರಿಸಿ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು.

ಉದ್ಘಾಟನೆ ವೇಳೆ ಪರಮೇಶ್ವರ್ ಅವರು ಸಿದ್ದರಾಮಯ್ಯನವರ ಪಕ್ಕ ಮುಂಚೂಣಿಯಲ್ಲಿ ನಿಂತಿದ್ದರೆ ಡಿ.ಕೆ.ಶಿವಕುಮಾರ್ ಹಿಂದೆಯೇ ಉಳಿದಿದ್ದರು. ಕಟ್ಟಡದ ನಾಮಫಲಕ ಅನಾವರಣದ ವೇಳೆ ಪರಮೇಶ್ವರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಕೈ ಹಿಡಿದು ಮುಖ್ಯಮಂತ್ರಿಯವರ ಪಕ್ಕದಲ್ಲಿ ನಿಲ್ಲಿಸಿದರು.

ಪ್ರತ್ಯೇಕ ಡಿನ್ನರ್ ಮೀಟಿಂಗ್ನಿಂದಾಗಿ ಕಾಂಗ್ರೆಸ್ನಲ್ಲಿ ಕಹಿಯ ವಾತಾವರಣ ನಿರ್ಮಾಣವಾಗಿತ್ತು. ಆದರೆ ಎಲ್ಲವನ್ನೂ ಮರೆತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹಸಚಿವರು ಕಾರ್ಯಕ್ರಮಗಳಲ್ಲಿ ನಗುಮುಖದೊಂದಿಗೆ ಕಾಣಿಸಿಕೊಂಡರು.ಈ ನಡುವೆ ಡಿ.ಕೆ.ಶಿವಕುಮಾರ್ ಅವರು ಪರಮೇಶ್ವರ್ ಅವರ ಬಳಿ ಡಿನ್ನರ್ ಮೀಟಿಂಗ್ ಕುರಿತು ಹಾಸ್ಯಚಟಾಕಿ ಹಾರಿಸಿದ್ದು ವಿಶೇಷವಾಗಿತ್ತು.

RELATED ARTICLES

Latest News