ಬೆಂಗಳೂರು, ಜ.24- ಗಣ ರಾಜ್ಯೋತ್ಸವದಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹದ್ದಿನ ಕಣ್ಣಿಡಲಾಗಿದ್ದು, ಭದ್ರತೆಗಾಗಿ ಅಧಿಕಾರಿಗಳು ಸೇರಿದಂತೆ 2 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಇಂದಿಲ್ಲಿ ತಿಳಿಸಿದರು.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೇಡ್ ನಡೆಯುವ ಮಾಣಿಕ್ ಷಾ ಮೈದಾನಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸುರಕ್ಷತೆಗಾಗಿ 100 ಸಿ.ಸಿ. ಕ್ಯಾಮೆರಾ ಹಾಗೂ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ ಎಂದರು.
ಹೆಚ್ಚುವರಿಯಾಗಿ ಕೆಎಸ್‌ಆರ್‌ಪಿ, ಸಿಎಆರ್ ಸೇರಿದಂತೆ 37 ತುಕಡಿಗಳನ್ನು ನಿಯೋಜಿಸಲಾಗಿದ್ದು, ಯಾವುದೇ ಸಣ್ಣಪುಟ್ಟ ಘಟನೆ ನಡೆಯಲು ಪೊಲೀಸರು ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬ್ಯುಲೆನ್‌್ಸಗಳನ್ನು ವೈದ್ಯಕೀಯ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿರುತ್ತದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
ಗಣರಾಜ್ಯೋತ್ಸವದಂದು ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಬಹುದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ. ಪರೇಡ್‌ಗೆ ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಆಹ್ವಾನಿತರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.










ಜನ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲು ಕ್ರಮ ವಹಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು.ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಗಣರಾಜ್ಯೋತ್ಸವ ದಿನಾಚರಣೆ ವೀಕ್ಷಿಸಲು ಆನ್‌ಲೈನ್ ಮೂಲಕ 2000 ಇ-ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ.
ಆಸಕ್ತರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಇ-ಪಾಸ್ ಅನ್ನು ಪಡೆಯಬಹುದಾಗಿರುತ್ತದೆ. ಭದ್ರತಾ ದೃಷ್ಟಿಯಿಂದ ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ.
ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ ಎಂಟು ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ಜಿಬಿಎ ವತಿಯಿಂದ ಮಾಡಲಾಗಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಪರೇಡ್ ವೀಕ್ಷಣೆಗೆ ಬರಲು ಮೆಟ್ರೋ-ಬಸ್ ಬಳಸಿ
ಬೆಂಗಳೂರು, ಜ. 24- ಇದೇ 26ರಂದು ನಗರದ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವವರು ಸಾರ್ವಜನಿಕ ಬಸ್‌ಗಳು ಹಾಗೂ ಮೆಟ್ರೋ ರೈಲು ಬಳಕೆ ಮಾಡಿಕೊಳ್ಳಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮನವಿ ಮಾಡಿಕೊಂಡಿದ್ದಾರೆ.
ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಇಂದು ಆಯೋಜಿಸಲಾಗಿದ್ದ ನಗರ ಜಿಲ್ಲಾಧಿಕಾರಿ ಜಗದೀಶ್, ನಗರ ಪೊಲೀಸ್ ಆಯುಕ್ತ ಸಿಮಂತ್‌ಕುಮಾರ್‌ಸಿಂಗ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮನವಿ ಮಾಡಿಕೊಂಡಿದ್ದಾರೆ.ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆ ಬಳಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
26 ರಂದು ಬೆಳಿಗ್ಗೆ 8.58 ಗಂಟೆಗೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸುತ್ತಾರೆ. ಅವರಿಗೆ ಭಾರತೀಯ ರಕ್ಷಣಾಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಪರಿಚಯಿಸಲಾಗುತ್ತದೆ.ರಾಜ್ಯಪಾಲರು ಬೆಳಿಗ್ಗೆ 9.00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಾರೆ.ಧ್ವಜಾರೋಹಣ ನಂತರ ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾರೆ.
ಕಳೆದ 3 ದಿನಗಳ ಕಾಲ ಸತತವಾಗಿ ರಿಹರ್ಸಲ್ ನಡೆಸಲಾಗುತ್ತಿದೆ. ಈ ಬಾರಿಯ ಪಥಸಂಚಲನದಲ್ಲಿ ಆರ್ಮಿ, ಏರ್‌ಫೋರ್ಸ್, ಸಿಆರ್‌ಪಿಎಫ್ ಮಹಿಳಾ ತಂಡ, ವಿಶೇಷವಾಗಿ ತಮಿಳುನಾಡು ರಾಜ್ಯ ಪೊಲೀಸ್, ಸ್ಕೌಟ್‌್ಸ ಅಂಡ್ ಗೈಡ್‌್ಸ, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 37 ತುಕಡಿಗಳಲ್ಲಿ ಸುಮಾರು 1100 ಮಂದಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಶಾಲಾ ಮಕ್ಕಳ ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1400 ಮಕ್ಕಳು ಭಾಗವಹಿಸಲಿದ್ದಾರೆ.ಪೊಲೀಸ್ ಇಲಾಖಾ ವತಿಯಿಂದ ಒಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಕಾರ್ಯ ಕ್ರಮಗಳ ನಂತರ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವಿರುತ್ತದೆ ಎಂದು ಅವರು ಹೇಳಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೀತಾ ಭತ್ತದ್ ತಂಡದವರಿಂದ ನಾಡಗೀತೆ ಹಾಗೂ ರೈತಗೀತೆ, ಪಾಲಿಕೆ ಶಾಲಾ ಮಕ್ಕಳ ವತಿಯಿಂದ ಸಂಕ್ರಾತಿ ಸಂಭ್ರಮ, ಬಾಗಲಗುಂಟೆ ಸರ್ಕಾರಿ ಶಾಲಾ ಮಕ್ಕಳಿಂದ ಭಾರತದ ಏಕೀಕರಣ ಮತ್ತು ನವಭಾರತ ಹಾಗೂ ಪೊಲೀಸ್ ಇಲಾಖೆಯಿಂದ ಸಾಮೂಹಿಕ ವಾದ್ಯಮೇಳ ನಡೆಯಲಿದೆ.
ಜ.26ರಂದು ಪರೇಡ್ ಮೈದಾನದ ಸುತ್ತಮುತ್ತ ಸಂಚಾರ ಬದಲಾವಣೆ
ಗಣರಾಜ್ಯೋತ್ಸವದ ಅಂಗವಾಗಿ ಮಾಣಿಕ್ ಷಾ ಮೈದಾನದಲ್ಲಿ ನಡೆಯಲಿರುವ ಪರೇಡ್‌ಗೆ ನಗರ ಸಂಚಾರ ಪೊಲೀಸರು ಫೀಲ್‌್ಡ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತಮುತ್ತ ಸಂಚಾರ ಬಂದೋಬಸ್ತ್ ಮಾಡಿದ್ದಾರೆ.
ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳಿಗೆ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡಬೇಕಿದೆ.
ತುರ್ತು ಸೇವಾ ವಾಹನಗಳಾದ ಅಂಬುಲೆನ್‌್ಸ, ಅಗ್ನಿಶಾಮಕ ದಳದ ವಾಹನಗಳು, ನೀರಿನ ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಜಿಬಿಎ ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.ಜ. 26ರ ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜರಸ್ತೆ ಜಂಕ್ಷನ್ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.
ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ಫೆಂಟ್ರಿರಸ್ತೆ – ಸಫೀನಾ ಪ್ಲಾಜಾ ಬಳಿ ಎಡತಿರುವು ಪಡೆದು ಮೈನ್ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ-ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.
ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕನ್‌್ಸ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.
ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ಫೆಂಟ್ರಿರಸ್ತೆ- ಸಫೀನಾ ಪ್ಲಾಜಾ-ಎಡಕ್ಕೆತಿರುವು ಪಡೆದು ಮೈನ್ಗಾರ್ಡ್ ರಸ್ತೆ-ಆಲಿ ಸರ್ಕಲ್- ಡಿಸ್ಪೆನ್ಸರಿರಸ್ತೆ ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ. ಕಬ್ಬನ್ ರಸ್ತೆ, ಸಿ.ಟಿ.ಓ. ವತ್ತ ದಿಂದ ಕೆ.ಆರ್.ರಸ್ತೆಯಿಂದ ಕಬ್ಬನ್ ರಸ್ತೆ ಜಂಕ್ಷನ್ ಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
