ಧಾರವಾಡ,ಜ.12-ಹಸುವಿನ ಕೆಚ್ಚಲು ಕೊಯ್ದಿರುವುದು ನೀಚ ಕೃತ್ಯ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.ರಾಜ್ಯದಲ್ಲಿ ಜಿಹಾದಿಗಳ ರಾಕ್ಷಸ ಕೃತ್ಯಕ್ಕೆ ಇದು ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ.
ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯಬಾವನೆ ಇದೆ ಅದು ಬರೀ ರಾಸಲ್ಲ ,ಅದು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಎಂದರು.
ಕೆಚ್ಚಲು ಕೊಯ್ದ ನೀಚರನ್ನು ಬಂಧಿಸಬೇಕು ಸಚಿವ ಜಮೀರ್‌ಅಹಮದ್ ಖಾನ್ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಅವರ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಇದೆ. ಕಾನೂನು ಇದ್ದರೂ ಕಾಂಗ್ರೇಸ್ ನಾಯಕರ ಮುಸ್ಲಿಂ ತುಷ್ಟೀಕರಣದಿಂದ ನಿರಂತರ ಗೋಹತ್ಯೆ ಆಗುತ್ತಿದೆ. ನಿರಂತರ ಕಸಾಯಿ ಖಾನೆಗೆ ಹಸು ಹೋಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ನಿಮ ಒಳಗೆ ಇರುವ ಬಾಂಗ್ಲಾದೇಶದವರ ಕುಕೃತ್ಯಕ್ಕೆ ಉತ್ತರ ನೀವೇ ಕೊಡಬೇಕು.ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.