ಕೋಲ್ಕತ್ತಾ,ಜ.13- ಐಐಟಿ-ಖರಗ್‌ಪುರದ ವಿದ್ಯಾರ್ಥಿಯೊಬ್ಬನ ಶವ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಪತ್ತೆಯಾಗಿದೆ.ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನ ಮೂರನೇ ವರ್ಷದ ವಿದ್ಯಾರ್ಥಿ ಶಾನ್ ಮಲಿಕ್ ಅವರನ್ನು ಭೇಟಿಯಾಗಲು ಬಂದಿದ್ದ ಪೋಷಕರಿಗೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಆತ ಪತ್ತೆಯಾಗಿದ್ದಾನೆ.
ಪದೇ ಪದೇ ಮೊಬೈಲ್ ಕರೆ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಪೋಷಕರು ಮತ್ತು ಸಂಸ್ಥೆಯ ಸಿಬ್ಬಂದಿ ಬಲವಂತವಾಗಿ ಹಾಸ್ಟೆಲ್ ಕೊಠಡಿಯ ಬಾಗಿಲು ತೆರೆಯಬೇಕಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಸಂಸ್ಥೆಯು ಸಾವಿನ ಕುರಿತು ಆಂತರಿಕ ತನಿಖೆ ನಡೆಸುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
ಘಟನೆ ಬಗ್ಗೆ ಪೊಲೀಸರು ತನಿಖೆಯನ್ನೂ ಆರಂಭಿಸಿದ್ದಾರೆ. ಮಲಿಕ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ