Monday, January 13, 2025
Homeರಾಜಕೀಯ | Politicsಜೆಡಿಎಸ್‌‍ ಮುಗಿಸಲು ಕಾಂಗ್ರೆಸ್‌‍ ಹೊಂಚು ಹಾಕುತ್ತಿದೆ : ದೇವೇಗೌಡರ ಆರೋಪ

ಜೆಡಿಎಸ್‌‍ ಮುಗಿಸಲು ಕಾಂಗ್ರೆಸ್‌‍ ಹೊಂಚು ಹಾಕುತ್ತಿದೆ : ದೇವೇಗೌಡರ ಆರೋಪ

Congress is plotting to finish JDS: Deve Gowda's allegations

ಬೆಂಗಳೂರು, ಜ.13-ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಮತ್ತು ಜೆಡಿಎಸ್‌‍ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್‌‍ ಹೊಂಚು ಹಾಕುತ್ತಿದ್ದು, ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಗುಡುಗಿದರು.

ಜೆಡಿಎಸ್‌‍ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್‌ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.

ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್‌‍ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್‌‍ ನಂಬಿದೆ. ಅದಕ್ಕೆ ಕಾರಣ ಇಷ್ಟೇ. ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಎಂದು ಅವರು ಹೇಳಿದರು.

ಜೆಡಿಎಸ್‌‍ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್‌‍ ಹೇಳುತ್ತದೆ. ಯಾರಾದರೂ ಒಮೆ ಕಾಂಗ್ರೆಸ್‌‍ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ೇಟೋಗಳನ್ನು ಒಮೆ ನೋಡಿ. ಕುಟುಂಬ ಆಧಾರಿತ ಪಕ್ಷ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.

ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.

RELATED ARTICLES

Latest News