ಬೆಂಗಳೂರು, ಸೆ.26- ರೈತ ಹಾಗೂ ಕನ್ನಡ ಪರ ಸಂಘಟನೆಗಳ ತೀವ್ರ ಪ್ರತಿಭಟನೆ ನಡುವೆಯೂ ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಮತ್ತೆ ಕರ್ನಾಟಕಕ್ಕೆ ವ್ಯತಿರಿಕ್ತವಾದ ತೀರ್ಪು ಹೊರ ಬಿದ್ದಿದೆ. 150 ವರ್ಷಗಳ ಹಳೆಯದಾದ ಅಂತಾರಾಜ್ಯ ವಿವಾದದಲ್ಲಿ ನ್ಯಾಯಾಧೀಕರಣದ ತೀರ್ಪಿನ ಬಳಿಕ, ನೀರಿನ ಹಂಚಿಕೆಯಲ್ಲಿ ಆದ್ಯ ಪಾತ್ರ ವಹಿಸುತ್ತಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಮಹತ್ವದ ಸಭೆ ನಡೆಸಿದೆ. ಅಲ್ಲಿ ತಮಿಳುನಾಡು, ಕರ್ನಾಟಕ ಸೇರಿದಂತೆ ಕಾವೇರಿ ನದಿ ಪಾತ್ರದ ನೀರಿನಲ್ಲಿ ಹಕ್ಕು ಸಾಮ್ಯತೆ ಹೊಂದಿರುವ ಕೇರಳ, ಪಾಂಡಿಚೇರಿ ರಾಜ್ಯಗಳ ನೀರಾವರಿ ಇಲಾಖೆ ಅಧಿಕಾರಿಗಳು, ವಕೀಲರು ಭಾಗವಹಿಸಿದ್ದರು.
ಕರ್ನಾಟಕ ತನ್ನಲ್ಲಿ ನೀರಿಲ್ಲ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಕೆಆರ್ಎಸ್, ಕಬಿನಿ, ಹಾರಂಗಿ, ಹೇಮಾವತಿ ಸೇರಿ ನಾಲ್ಕು ಜಲಾಶಯಗಳಲ್ಲಿ 53.04 ಟಿಎಂಸಿಯಷ್ಟು ಮಾತ್ರ ನೀರು ಸಂಗ್ರಹವಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಹಲವಾರು ನಗರ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಈಗಾಗಲೇ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ರಾಜ್ಯಕ್ಕೆ 106 ಟಿಎಂಸಿ ನೀರಿನ ಅಗತ್ಯ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತ್ತು.
ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್
ರಾಜ್ಯದಲ್ಲಿ 195 ತಾಲ್ಲೂಕುಗಳು ಬರಪೀಡಿತವಾಗಿವೆ. ಮುಂದೆ ಮಳೆಯಾಗುವ ನಿರೀಕ್ಷೆಗಳು ಇಲ್ಲ. ಸಂಕಷ್ಟ ಸಂದರ್ಭದಲ್ಲಿ ಪಾಲಿಸಬೇಕಾದ ಸೂತ್ರ ರಚನೆಯಾಗಿಲ್ಲ. ಹಾಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಇದಕ್ಕೆ ಪ್ರತಿಯಾಗಿ ತಮಿಳುನಾಡು ಸರ್ಕಾರ ತನ್ನ ವಾದ ಮಂಡಿಸಿದ್ದಲ್ಲದೆ. ಇತ್ತಿಚೆಗೆ ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.
ಹೀಗಾಗಿ ತಮಿಳುನಾಡಿಗೆ 12500 ಕ್ಯೂಸೆಕ್ ನೀರು ಹರಿಸಬೇಕು ಎಂದಿತ್ತು. ಕರ್ನಾಟಕ ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ನ ಆದೇಶಗಳನ್ನು ಪಾಲನೇ ಮಾಡುತ್ತಿಲ್ಲ. ನ್ಯಾಯಾಧಿಕರಣದ ತೀರ್ಪಿನ ಅನುಸಾರ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿತ್ತು.
ಫೆನ್ಸಿಂಗ್‍ನಲ್ಲಿ ಭಾರತದ ಚೊಚ್ಚಲ ಏಷ್ಯನ್ ಗೇಮ್ಸ್ ಪದಕದ ಭರವಸೆ
ವಾದ, ಪ್ರತಿವಾದಗಳನ್ನು ಆಲಿಸಿದ ನೀರು ನಿರ್ವಹಣಾ ಮಂಡಳಿ ಸೆಪ್ಟಂಬರ್ 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಶಿಫಾರಸ್ಸು ನೀಡಿದೆ. ಮಂಗಳವಾರ ಬೆಳಗ್ಗೆ 8ಗಂಟೆಯಿಂದ ಆರಂಭಗೊಳ್ಳುವ ಲೆಕ್ಕದಲ್ಲಿ ತಮಿಳುನಾಡಿನ ಬಿಳಿಗುಂಡ್ಲು ಜಲಾಶಯಕ್ಕೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಯಬೇಕು ಎಂದು ಸೂಚಿಸಲಾಗಿದೆ