ನಿತ್ಯ ನೀತಿ : ಬದುಕಿನಲ್ಲಿ ಕಷ್ಟದ ದಿನಗಳ ಅರಿವಿಲ್ಲದಿದ್ದರೆ ಒಳ್ಳೆಯ ದಿನಗಳ ಅನುಭವ ಆಗುವುದಿಲ್ಲ.
ಪಂಚಾಂಗ : ಗುರುವಾರ, 16-01-2025
ಕ್ರೋಧಿನಾಮ ಸಂವತ್ಸರ / ಉತ್ತರಾಯನ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಆಶ್ಲೇಷಾ / ಯೋಗ: ಆಯುಷಾನ್ / ಕರಣ: ವಣಿಜ್
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.13
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ವೃಷಭ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮದಿ ಸಿಗಲಿದೆ.
ಮಿಥುನ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಕಟಕ: ಯಂತ್ರೋಪಕಣ ದುರಸ್ತಿ ಮಾಡುವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಸಿಂಹ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಕನ್ಯಾ: ಉನ್ನತ ಅಧಿಕಾರಿ ಗಳು ನಿಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.
ತುಲಾ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.
ವೃಶ್ಚಿಕ: ಸಾಲಗಾರರ ಕಿರಿಕಿರಿ ಉಂಟಾಗಲಿದೆ. ಮಕ್ಕಳ ವಿಷಯದಲ್ಲಿ ಚಿಂತೆ ಕಾಡಲಿದೆ.
ಧನುಸ್ಸು : ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಕರ: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಕುಂಭ: ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದೂರ ಪ್ರಯಾಣ ಮಾಡದಿರಿ.
ಮೀನ: ಸರಿಯಾದ ಗುರಿ ಮುಟ್ಟಲು ನಿಮಗೆ ಗುರುಗಳ ಮಾರ್ಗದರ್ಶನ ಅತ್ಯವಶ್ಯಕ.