ಬೆಂಗಳೂರು,ಜ.15– ಬ್ಯಾಂಕ್ಗಳ ಬಳಿ ಹೊಂಚು ಹಾಕಿ ಬ್ಯಾಂಕ್ನಿಂದ ಹೊರಬರುವ ಗ್ರಾಹಕರನ್ನು ಹಿಂಬಾಲಿಸಿ ಹಣ ಹಾಗೂ ಆಭರಣಗಳನ್ನು ದೋಚುತ್ತಿದ್ದ ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿ, 10 ಲಕ್ಷ ನಗದು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ದೇವಸಂದ್ರದ ನಿವಾಸಿಯೊಬ್ಬರು ಬ್ಯಾಂಕ್ನಿಂದ 4 ಲಕ್ಷ ಹಣ ಡ್ರಾ ಮಾಡಿ ಕಾರಿನಲ್ಲಿ ಹೋಗುತ್ತಿದ್ದಾಗ ಟಿ.ಸಿ.ಪಾಳ್ಯದ ಹತ್ತಿರ ಎರಡು ದ್ವಿಚಕ್ರ ವಾಹನಗಳಲ್ಲಿ ಮೂವರು ಖದೀಮರು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರಿನ ವೀಲ್ ಪಂಚರ್ ಆಗಿದೆ ಎಂದು ಗಮನ ಬೇರೆಡೆ ಸೆಳೆದಿದ್ದಾರೆ. ಪಂಚರ್ ಶಾಪ್ನಲ್ಲಿ ಪಂಚರ್ ಹಾಕಿಸಿ ಹಣ ಕೊಡಲು ಹೋದಾಗ ಕಾರಿನ ಡ್ಯಾಶ್ಬೋರ್ಡ್ನಲ್ಲಿದ್ದ 4 ಲಕ್ಷ ಹಣವನ್ನು ಖದೀಮರು ಕಳವು ಮಾಡಿಕೊಂಡು ಪರಾರಿಯಾಗಿದ್ದರು.
ಕೆಲ ಸಮಯದ ಬಳಿಕ ಹಣ ಕಳವಾಗಿರುವುದು ಗಮನಿಸಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಬ್ಯಾಂಕ್ ಸತ್ತಮುತ್ತಲಿನ ರಸ್ತೆಯಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿ 10 ಲಕ್ಷ ಹಣ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಐದು ಮಂದಿಯ ಪತ್ತೆ ಕಾರ್ಯ ಮುಂದುವರೆದಿದೆ. ಪ್ರಕರಣವನ್ನು ಇನ್ಸ್ಪೆಕ್ಟರ್ ರಾಮಮೂರ್ತಿ ಹಾಗೂ ಸಿಬ್ಬಂದಿ ತಂಡ ಬೇಧಿಸುವಲ್ಲಿ ಯಶಸ್ವಿಯಾಗಿದೆ.
ಹಣ-ಚಿನ್ನಾಭರಣ ಸುಲಿಗೆ : ಮಹಿಳೆ ಸೇರಿ 7 ಮಂದಿ ಸೆರೆ
ಬೆಂಗಳೂರು,ಜ.15- ನಗರ ಪೊಲೀಸರು ಮಹಿಳೆ ಸೇರಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸಿ ನಗದು ಸೇರಿದಂತೆ 79.63 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಕೊತ್ತನೂರು :
ಬ್ಯಾಂಕ್ ಲಾಕರ್ನಿಂದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬ್ಯಾಗ್ ಅಪಹರಿಸಿ ಪರಾರಿಯಾಗಿದ್ದ ಇಬ್ಬರನ್ನು ಬಂಧಿಸಿ 1.10 ಲಕ್ಷ ರೂ. ಹಾಗೂ 324 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ಬಾಲಾಜಿ ಲೇಔಟ್ ಹಾಗೂ ಇನ್ನಿತರ ಕಡೆ ಕಳವು ಮಾಡಿದ್ದ ಮಾಲನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 23 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.
ಇನ್ಸ್ ಪೆಕ್ಟರ್ ಚೇತನ್ಕುಮಾರ್ ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.
ಬೇಗೂರು :
ಮನೆಯ ಕೀಯನ್ನು ಶೂ ರ್ಯಾಕ್ನಲ್ಲಿ ಇಟ್ಟಿರುವುದನ್ನು ಗಮನಿಸಿದ ಕಳ್ಳ ಕೆಲ ಸಮಯದ ಬಳಿಕ ಹೋಗಿ ಆ ಕೀ ಬಳಸಿ ಬೀಗ ತೆಗೆದು ಒಳನುಗ್ಗಿ ಕಳವು
ಮಾಡಿದ್ದ 18.53 ಲಕ್ಷ ರೂ. ಮೌಲ್ಯದ 261 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಕಳವು ಮಾಡಿದ ಆಭರಣಗಳ ಪೈಕಿ ಕೆಲವನ್ನು ಮುತ್ತೂಟ್ ಹಾಗೂ ಮಣಪ್ಪುರಂ ಗೋಲ್‌್ಡ ಲೋನ್ ಕಂಪನಿ ಹಾಗೂ ಬೇಗೂರಿನ 2 ಗಿರವಿ ಅಂಗಡಿಗಳಲ್ಲಿ ಅಡಮಾನವಿಟ್ಟಿದ್ದ ಆಭರಣವನ್ನು ವಶಪಡಿಸಿಕೊಳ್ಳುವಲ್ಲಿ ಇನ್‌್ಸಪೆಕ್ಟರ್ ಕೃಷ್ಣಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿದೆ.
ತಲಘಟ್ಟಪುರ :
ಒಂಟಿಯಾಗಿ ಹೋಗುವ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಸರಾಪಹರಣ ಮಾಡುತ್ತಿದ್ದ ಮೂವರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿ 20 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ಬಂಧನದಿಂದ 5 ಸರ ಅಪಹರಣ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ತಂಡದವರು ಯಶಸ್ವಿಯಾಗಿರುತ್ತಾರೆ.
ಹೆಣ್ಣೂರು :
ಮನೆ ಕಿಟಕಿಯ ಪಕ್ಕದಲ್ಲಿಟ್ಟಿದ್ದ ಕೀಯನ್ನು ಬಳಸಿ ಬಾಗಿಲು ತೆಗೆದು ಒಳನುಗ್ಗಿ ಚಿನ್ನ ಹಾಗೂ ಬೆಳ್ಳಿ ವಸ್ತುಗಳು ಮತ್ತು ಹಣ ಕಳವು ಮಾಡಿಕೊಂಡು ಪರಾರಿಯಾಗಿದ್ದ ಮಹಿಳೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ 7.80 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಮಹಿಳೆ ಮನೆಗಳ ಮುಂದೆ ತಿರುಗಾಡುತ್ತಾ ಬೀಗ ಹಾಕಿ ಕೀ ಇಡುವ ಜಾಗವನ್ನು ನೋಡಿಕೊಂಡು ತದನಂತರ ಮನೆಯವರು ಹೊರಹೋದ ನಂತರ ಅದೇ ಕೀಯನ್ನು ಬಳಸಿ ಕಳವು ಮಾಡುತ್ತಿದ್ದುದು ವಿಚಾರಣೆಯಿಂದ ಗೊತ್ತಾಗಿದೆ.
ಈ ಪ್ರಕರಣವಲ್ಲದೆ ನಗರದ ವಿವಿಧ ಕಡೆಗಳಲ್ಲೂ ಸಹ ಮನೆಗಳವು ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿದ್ದು, ಕಳವು ಮಾಡಿದ ಆಭರಣಗಳನ್ನು ಜ್ಯುವೆಲ್ಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ಪೊಲೀಸರು ಆ ಅಂಗಡಿಗಳಿಂದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆಯನ್ನು ಇನ್ಸ್ ಪೆಕ್ಟರ್ ದೀಪಕ್ ಹಾಗೂ ಸಿಬ್ಬಂದಿಯವರು ಕೈಗೊಂಡು ಆರೋಪಿ ಮಹಿಳೆಯನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.