ಬೆಂಗಳೂರು,ಜ.16- ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.
ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ.
ಸಿಎಂ ಸಿದ್ದರಾಮನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು ನಿಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ ಹೇಗೆ? ನಿಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ? ಎಂದು ಪ್ರಶ್ನೆ ಮಾಡಿದ್ದಾರೆ.
ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ಅವರು ಆಗ್ರಹಿಸಿದ್ದಾರೆ.