ಒಟ್ಟಾವಾ, ಜ.17- ಜಸ್ಟಿನ್ ಟ್ರುಡೋ ಅವರ ರಾಜೀನಾಮೆಯಿಂದ ತೆರವಾಗಿರುವ ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಅವರು ಕನ್ನಡದಲ್ಲೇ ಮಾತನಾಡಿ ಗಮನ ಸೆಳೆದಿದ್ದಾರೆ.ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹ್ದುೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮೆಯ ವಿಚಾರ ಎಂದು ಅವರು ಹೇಳಿದ್ದಾರೆ.
ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.
2040 ರಲ್ಲಿ ನಿವತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು ಚಂದ್ರ ಆರ್ಯ ಭರವಸೆಗಳನ್ನು ಈಗಾಗಲೇ ನೀಡಿದ್ದರು.
ನಮ ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಸಮದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಣ್ಣ, ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು 2015 ರಲ್ಲಿ ನೇಪಿಯನ್‌ನ ಉಪನಗರ ರೈಡಿಂಗ್‌ನಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಆರ್ಯ ಹೇಳಿದ್ದರು.