ನಿತ್ಯ ನೀತಿ : ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತಲೂ, ಹೃದಯವಂತರ ಜೊತೆ ಮೂರು ದಿನ ಬದುಕಿದರೂ ಜೀವನ ಸಾರ್ಥಕ. – ಸ್ವಾಮಿ ವಿವೇಕಾನಂದ
ಪಂಚಾಂಗ : ಸೋಮವಾರ, 26-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಅಶ್ವಿನಿ / ಯೋಗ: ಸಾಧ್ಯ / ಕರಣ: ವಿಷ್ಟಿ
ಸೂರ್ಯೋದಯ – 06.47
ಸೂರ್ಯಾಸ್ತ – 6.18
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು ನೀಡುವ ಸಲಹೆಗಳಿಂದ ದೂರವಾಗಲಿವೆ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನ ಹರಿಸಿ. ನಿರೀಕ್ಷೆಗೂ ಮೀರಿ ಖರ್ಚು ಹೆಚ್ಚಾಗಲಿದೆ.
ಕಟಕ: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.
ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ. ಖರ್ಚು ಸ್ವಲ್ಪ ಹೆಚ್ಚಾಗಬಹುದು.
ವೃಶ್ಚಿಕ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವವರು ಎಚ್ಚರಿಕೆಯಿಂದಿರಿ.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಕುಂಭ: ಧಾರ್ಮಿಕ ಕಾರ್ಯಗಳತ್ತ ಗಮನ ಹರಿಸುವಿರಿ. ಕೀರ್ತಿ ನಿಮ್ಮನ್ನು ಅರಸಿ ಬರಲಿದೆ.
ಮೀನ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
