Sunday, January 25, 2026
Homeರಾಜಕೀಯರಾಜಕಾರಣಕ್ಕಾಗಿ ರಾಜ್ಯಪಾಲರಿಗೆ ಕಾಂಗ್ರೆಸ್ ಅಗೌರವ : ಬೊಮ್ಮಾಯಿ ಕಿಡಿ

ರಾಜಕಾರಣಕ್ಕಾಗಿ ರಾಜ್ಯಪಾಲರಿಗೆ ಕಾಂಗ್ರೆಸ್ ಅಗೌರವ : ಬೊಮ್ಮಾಯಿ ಕಿಡಿ

Congress disrespects Governor for politics: Bommai

ಬೆಂಗಳೂರು,ಜ.25- ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದು ಹಾಗೂ ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರವಾಗಿದ್ದು, ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ ಎಂದು ಹೇಳಿದ್ದಾರೆ.

ಅತ್ಯಂತ ಹಿರಿಯ ಶಾಸಕ ಬಿ.ಕೆ. ಹರಿಪ್ರಸಾದ್‌ ಅವರ ವರ್ತನೆ ಕಾಂಗ್ರೆಸ್‌‍ ಪಕ್ಷದ ಮನಃಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿಸುವುದು ಅತ್ಯಂತ ಅವಶ್ಯಕ. ಈ ಹಿಂದೆ ಹಂಸರಾಜ ಭಾರದ್ವಾಜ್‌ ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ.ಅಂದಿನ ರಾಜಭವನ ಕಾಂಗ್ರೆಸ್‌‍ ಭವನ ಆಗಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತರೇ? ಎಂದು ಅವರು ಪ್ರಶ್ನಿಸಿದ್ದಾರೆ.

RELATED ARTICLES

Latest News