ಬೆಂಗಳೂರು,ನ.19- ಜನರಿಗೆ ಮಾನ-ಪ್ರಾಣದ ರಕ್ಷಣೆಯ ಭಾಗ್ಯ ಕಲ್ಪಿಸಲಾಗದಿದ್ದರೆ, ಸರ್ಕಾರ ಯಾವ ಭಾಗ್ಯ ಕೊಟ್ಟರೂ ಅದು ನಿರರ್ಥಕ ಎಂಬ ಅರಿವು ಸರ್ಕಾರಕ್ಕಿರಬೇಕು ಎಂದು ತಿವಿದಿದ್ದಾರೆ. ಬಡವರ ರಕ್ಷಣೆಗೆ ಈ ಕೂಡಲೇ ಸರ್ಕಾರ ಧಾವಿಸಿ ಬರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಇನ್ನು ನೊಂದವರಿಗೆ ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವ ಧೈರ್ಯ ಮೊದಲೇ ಇರುವುದಿಲ್ಲ. ಪೊಲೀಸ್ ರಕ್ಷಣೆಗೆ ದೂರು ನೀಡಿದರೂ ಅದನ್ನು ಗಂಭೀರವಾಗಿ ಸ್ವೀಕರಿಸುವ ಮನೋಭಾವ ಪ್ರದರ್ಶಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದೆ.
ಮೈಕ್ರೋ ಫೈನಾನ್ಸ್ ಜಾಲದ ದೌರ್ಜನ್ಯಗಳನ್ನು ಹತ್ತಿಕ್ಕಲು ಸಾಧ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡು ಅಮಾಯಕರ ರಕ್ಷಣೆಗೆ ನಾವಿದ್ದೇವೆ ಎಂಬ ಅಭಯವನ್ನಾದರೂ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.