ಗ್ವಾಲಿಯರ್,ಜ.20- ಕೆಲಸ ಸಿಗದೆ ಮನನೊಂದ ಮಗನ ಆತ್ಮಹತ್ಯೆ ಸುದ್ದಿ ಕೇಳಿದ ತಾಯಿ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ.ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ 33 ವರ್ಷದ ಮನೀಶ್ ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಗೆ ಹದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 33 ವರ್ಷದ ಎಂಜಿನಿಯರಿಂಗ್ ಪದವೀಧರ ವಿಷ ಸೇವಿಸಿ ಆತಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕಪಕ್ಕದ ಮನೆಯವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮನೀಶ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.
ಸಂಬಂಧಿತ ಪರೀಕ್ಷೆಗಳಿಗೆ ಹಾಜರಾಗಿದ್ದರೂ ನೌಕರಿ ಪಡೆಯಲು ವಿಫಲನಾದ ಕಾರಣ ಆತ ಒತ್ತಡಕ್ಕೊಳಗಾಗಿದ್ದ. ಮತನ ತಾಯಿಗೆ ತನ್ನ ಮಗ ಆತಹತ್ಯೆ ಮಾಡಿಕೊಂಡಿದ್ದು ತಿಳಿಯುತ್ತಿದ್ದಂತೆ ಆಘಾತ ಸಹಿಸಲಾಗದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಯುವಕ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ನೌಕರಿ ಪಡೆಯಲು ಸಾಕಷ್ಟು ಬಾರಿ ಪ್ರಯತ್ನ ಪಟ್ಟಿದ್ದ, ಆದರೆ ಪದೇ ಪದೇ ವಿಫಲವಾಗುತ್ತಿದ್ದ, ಇದು ಆತ ಈ ರೀತಿಯ ಹೆಜ್ಜೆ ಇಡುವಂತಾಯಿತು. ಮಗನ ಸಾವಿನ ಬಗ್ಗೆ ತಾಯಿಗೆ ತಿಳಿಸಿದಾಗ ಹದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.