ಪುರಿ,ಜ.20- ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಟ್ರಂಪ್ ಅವರ 47 ಅಡಿ ಉದ್ದದ ಮರಳು ಕಲೆಯನ್ನು ರಚಿಸಿದ್ದಾರೆ.
ನಾನು ಟ್ರಂಪ್ ಅವರ ದೊಡ್ಡ ಅಭಿಮಾನಿಯಾಗಿರುವುದರಿಂದ ಅವರ ಮರಳು ಕಲಾಕೃತಿಯನ್ನು ರಚಿಸಿದ್ದೇನೆ ಎಂದು ಪಟ್ನಾಯಕ್ ತಿಳಿಸಿದ್ದಾರೆ.ಡೊನಾಲ್ಡ್ ಟ್ರಂಪ್ ಅವರು ಇಂದು ಅಮೆರಿಕಾದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಈ ಹಿಂದೆ 2017 ಮತ್ತು 2021 ರ ನಡುವೆ 45 ನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ರಿಲಯನ್‌್ಸ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಅವರು ಡೊನಾಲ್ಡ್ ಟ್ರಂಪ್ ಅವರ ಉದ್ಘಾಟನೆಗೆ ಮುನ್ನ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಖಾಸಗಿ ಸ್ವಾಗತ ಸಮಾರಂಭದಲ್ಲಿ ಅಭಿನಂದನೆಗಳನ್ನು ಸಲ್ಲಿಸಿದರು.