ಬೆಂಗಳೂರು,ಜ.21- ಮನೆ ಯೊಂದು ಮೂರು ಬಾಗಿಲು ಎಂಬಂತಾಗಿರುವ ರಾಜ್ಯ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ಬಡಿದಾಟಕ್ಕೆ ಅಂಕುಶ ಹಾಕಲು ಮುಂದಾಗಿರುವ ಕೇಂದ್ರದ ವರಿಷ್ಟರು ಕೊನೆಗೂ ಮಧ್ಯ ಪ್ರದೇಶ ಮಾಡಿದ್ದಾರೆ.
ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ನಾಳೆ ಬೆಂಗಳೂರಿಗೆ ಬರಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶಾಸಕರು, ಸಂಸದರು, ವಿಧಾನಪರಿಷತ್
ಸದಸ್ಯರನ್ನು ಒಳಗೊಂಡ ನಮ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಲಿದೆ.
ಆರಂಭದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಸಕರು, ಸಂಸದರ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಸಂಘಟನೆ ಪರ್ವದ ಪರಿಶೀಲನೆ ನಡೆಯಲಿದೆ. ಜಿಲ್ಲಾಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ.
ಸಂಜೆ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ನಂತರ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯವಾಗಿ ಯತ್ನಾಳ್, ವಿಜಯೇಂದ್ರ ಬಣದ ಹೇಳಿಕೆಗಳ ಬಗ್ಗೆ ಗಂಭೀರ ಚರ್ಚೆಯಾಗುವ ಸಾಧ್ಯತೆಯಿದೆ. ಕೋರ್ ಕಮಿಟಿ ಸಭೆಯಲ್ಲಿ ಶಾಸಕರು ಮತ್ತು ಸಂಸದರ ಅಭಿಪ್ರಾಯವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ.
ಅಲ್ಲದೆ, ಸಂಘಟನೆ ಸಂಬಂಧ ಚರ್ಚಿಸಲಿದ್ದಾರೆ. 4 ಗಂಟೆಗೆ ರಾಜ್ಯದಲ್ಲಿ ನಡೆಯುತ್ತಿರುವ ಸಂಘಟನಾ ಪರ್ವದ ಕುರಿತು ಚರ್ಚೆ ನಡೆಸಲಿದ್ದಾರೆ. ಮಂಡಲ ಅಧ್ಯಕ್ಷರ ಚುನಾವಣೆ ನಡೆದಿದೆ. ಜಿಲ್ಲಾಧ್ಯಕ್ಷರ ನಿಯೋಜನೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಕೂಡ ಚರ್ಚೆ ನಡೆಯಲಿದೆ.
ಪಕ್ಷದ ಚುನಾವಣಾ ಅಧಿಕಾರಿಗಳು, ಸಹ ಅಧಿಕಾರಿಗಳು, 13 ಜನ ಮೇಲ್ವಿಚಾರಕರ ಸಭೆಯೂ ನಡೆಯಲಿದೆ. ಈ 3 ಸಭೆಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಪರಿಸ್ಥಿತಿ, ಸಂಘಟನಾ ವಿಚಾರವಾಗಿ, ರಾಜ್ಯದ ಅಧ್ಯಕ್ಷರ ವಿಚಾರವಾಗಿ ಎಲ್ಲವೂ ಕೂಡ ಸಮಗ್ರವಾಗಿ ಚರ್ಚೆ ಆಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬಿಜೆಪಿ ಕಚೇರಿಯಲ್ಲಿ 3 ಗಂಟೆಗೆ ಚುನಾಯಿತ ಸದಸ್ಯರು, ಸಂಸದರು, ಶಾಸಕರ ಜೊತೆ ಸಭೆ ಕರೆದಿದ್ದಾರೆ. ಅಲ್ಲಿ ಎಲ್ಲರ ಅಭಿಪ್ರಾಯ ಪಡೆಯುತ್ತಾರೆ. 4 ಗಂಟೆಗೆ ಸಂಘಟನಾ ಪರ್ವ, ಜಿಲ್ಲಾ ಅಧ್ಯಕ್ಷರ ಚುನಾವಣೆ ಬಗ್ಗೆ ಸಭೆ ಇದೆ. ರಾಜ್ಯಾಧ್ಯಕ್ಷರ ಚುನಾವಣೆ ಚರ್ಚೆ ಆಗುತ್ತದೆ. ಚುನಾವಣೆ ಪದಾಧಿಕಾರಿಗಳ ಸಭೆ ಕೂಡ ನಡೆಯಲಿದೆ. ತದನಂತರ 7 ಗಂಟೆಗೆ ಕೋರ್ ಕಮಿಟಿ ಸಭೆ ನಡೆಯುತ್ತದೆ. ಸಭೆಯಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ, ರಾಜ್ಯಾಧ್ಯಕ್ಷ ಬಗ್ಗೆ ಚರ್ಚೆ ನಡೆಯುತ್ತದೆ.