Thursday, January 23, 2025
Homeಮನರಂಜನೆಜ.24 ರಂದು ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಜ.24 ರಂದು ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ

Darshan's bail plea to be heard in Supreme Court on Jan. 24

ಬೆಂಗಳೂರು,ಜ.22– ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ.

ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ವಕೀಲ ಅನಿಲ್ ನಿಶಾನಿ ಅವರು ಮೇಲನವಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳು ನೀಡಿರುವ ಷರತ್ತುಬದ್ಧ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿದ್ದಾರೆ.

ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಪಟ್ಟಿ, ಪಂಚನಾಮೆ ದಾಖಲೆಗಳು, ಸಾಕ್ಷೀದಾರರ ಹೇಳಿಕೆಗಳು ಸೇರಿದಂತೆ ಒಟ್ಟು 1498 ಪುಟಗಳ ಕಡತವನ್ನು ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಎಫ್ಎಸ್ಎಲ್ ವರದಿ, ಸಿಡಿಆರ್ ಮತ್ತು ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿ ಜಾಮೀನು ರದ್ದು ಮಾಡಬೇಕೆಂದು ಮೇಲನವಿ ಅರ್ಜಿಯಲ್ಲಿ ಅನಿಲ್ ನಿಶಾನಿ ಮನವಿ ಮಾಡಿದ್ದಾರೆ.

ಈ ಪ್ರಕರಣವು ಅಪರೂಪದಲ್ಲೇ ಅಪರೂಪದ ಪ್ರಕರಣ. ಎಂತಹ ನಾಗರಿಕ ಸಮಾಜವು ತಲೆತಗ್ಗಿಸುವ ಘಟನೆ ಇದಾಗಿದ್ದು, ಆರೋಪಿ ಸ್ಥಾನದಲ್ಲಿರುವ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ವಿಶ್ವಾಜಿತ್ ಶೆಟ್ಟಿ ಅವರು ನೀಡಿರುವ ಷರತ್ತುಬದ್ಧ ಜಾಮೀನುನನ್ನು ರದ್ದುಪಡಿಸಬೇಕೆಂದು ಕೋರಲಾಗಿದೆ.

ಕಳೆದ ಡಿಸೆಂಬರ್ 13ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿಯಾಗಿದ್ದ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್, ಎ3 ಪವನ್, ಎ4 ಜಗದೀಶ್, ಎ5 ನಂದೀಶ್, ಎ7 ಅನುಕುಮಾರ್, ಎ9 ಧನರಾಜ್, ಎ10 ವಿನಯ್, ಎ12 ಲಕ್ಷ್ಮಣ್, ಎ11 ನಾಗರಾಜ್, ಎ14 ಪ್ರದೂಷ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಇದೀಗ ಆರೋಪಿಗಳಿಗೆ ನೀಡಿರುವ ಜಾಮೀನನ್ನು ರದ್ದುಪಡಿಸಬೇಕೆಂದು ರಾಜ್ಯ ಸರ್ಕಾರ ಮನವಿ ಮಾಡಲು ಮುಂದಾಗಿದೆ.

ಪ್ರಕರಣ ಹಿನ್ನಲೆ:
ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಾನೆದಂದು ದರ್ಶನ್ ಗ್ಯಾಂಗ್, ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದರು. ಅಂದೇ ರೇಣುಕಾಸ್ವಾಮಿಯನ್ನು ಕೂಡಿ ಹಾಕಿದ್ದ ಶೆಡ್ಗೆ ಬಂದ ದರ್ಶನ್ ಹಾಗೂ ಪವಿತ್ರಾ ಗೌಡ ಆತನ ಮೇಲೆ ಹಲ್ಲೆ ನಡೆಸಿದ್ದರು ಎಂಬ ವಿಚಾರ ಚಾರ್ಜ್ಶೀಟ್ನಲ್ಲಿ ದಾಖಲಾಗಿ ನಿರಂತರವಾಗಿ ಹಲ್ಲೆ ನಡೆಸಿದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜೂನ್ 11 ರಿಂದ 21ರವರೆಗೂ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ದರ್ಶನ್ ವಿಚಾರಣೆ ನಡೆಸಿದ್ದರು. ಜೂನ್ 11ರಂದು ದರ್ಶನ್ ಬಂಧಿಸಿದ ಬಳಿಕ ಬರೋಬ್ಬರಿ 12 ದಿನಗಳ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದರು. ಆರಂಭದಲ್ಲಿ ನನಗೇನು ಗೊತ್ತಿಲ್ಲ ಅಂತಿದ್ದ ದರ್ಶನ್ ಬಳಿಕ ಸತ್ಯ ಬಾಯ್ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಕೊಲೆ ಪಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ.

ಮೈಸೂರಿನ ಫಾರ್ಮ್ ಹೌಸ್ನಲ್ಲಿ ದರ್ಶನ್!
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿದ್ದ ಪತ್ನಿ ವಿಜಯಲಕ್ಷಿ ಅವರ ಅಪಾರ್ಟೆಂಟ್ನಲ್ಲಿದ್ದ ನಟ ದರ್ಶನ್, ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ ಕೇಳಿದ್ರು. ಅನುಮತಿ ಸಿಗ್ತಿದ್ದಂತೆ ನಟ ಮೈಸೂರಿನ ಶ್ರೀರಂಗಪಟ್ಟಣದ ಬಳಿ ಇರುವ ತಮ ಫಾರ್ಮ್ ಹೌಸ್ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.

RELATED ARTICLES

Latest News