ಬೆಂಗಳೂರು,ಜ.25- ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಮೈಕ್ರೋ ಫೈನಾನ್‌್ಸನ ಹಾವಳಿಗೆ ಕೊನೆಗೂ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮನಿ ಲಾಂಡ್ರಿಂಗ್ ನಿಯಂತ್ರಣ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ಮುಂದಾಗಿದೆ.
ಆಂಧ್ರಪ್ರದೇಶದ ಮಾದರಿಯಲ್ಲಿ ಕರ್ನಾಟಕ ಮನಿ ಲಾಂಡ್ರಿಂಗ್ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದೇ 29ರಂದು(ಗುರುವಾರ) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಬರಲಿದ್ದು, ನಂತರ ಬಜೆಟ್ ಅಧಿವೇಶನದ ವೇಳೆ ಕಾಯ್ದೆಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರ ಮಾಡಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್ , ಫೈನಾನ್ಸ್ , ಆರ್ಬಿಐ, ನಬಾರ್ಡ್ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಮೈಕ್ರೋ ಫೈನಾನ್‌್ಸನ ಹಾವಳಿಯನ್ನು ನಿಯಂತ್ರಿಸಲು ಕಾಯ್ದೆ ತರುವ ಅಗತ್ಯತೆಯನ್ನು ಕಾನೂನು ಇಲಾಖೆಯ ಅಧಿಕಾರಿಗಳು ಸಿಎಂಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸಭೆಯಲ್ಲಿ ಭಾಗವಹಿಸಿದ್ದ ಸಚಿವರು ಮತ್ತು ಅಧಿಕಾರಿಗಳು ಸಮತಿ ಸೂಚಿಸಿದರು.
ಹೊಸ ಕಾನೂನಿನ ಅಗತ್ಯತತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗೆ ಮನವರಿಕೆ ಮಾಡಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣಭೈರೇಗೌಡ, ಆರ್ಬಿಐನ ಉನ್ನತ ಅಧಿಕಾರಿಗಳು ಕೂಡ ದನಿಗೂಡಿಸಿದರು.
ಅಂತಿಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್‌್ಸಗಳ ಹಾವಳಿಗೆ ಕಡಿವಾಣ ಹಾಕಲು ಕಾಯ್ದೆಯನ್ನು ಜಾರಿಗೊಳಿಸುವ ಒಮತಕ್ಕೆ ಬಂದರು. ಇದಕ್ಕೂ ಮುನ್ನ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಕಂದಾಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಆರ್ಬಿಐ ಅಧಿಕಾರಿಗಳು, ಫೈನಾನ್ಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸುಗ್ರೀವಾಜ್ಞೆ ಮೂಲಕ ಜಾರಿಗೆ ಬರಲಿರುವ ಕಾಯ್ದೆಯಲ್ಲಿ ಹಲವು ಅಂಶಗಳು ಅಡಕವಾಗಿದೆ. ಇನ್ನು ಮುಂದೆ ಸಾಲಗಾರರಿಗೆ ಸಾಲ ವಿತರಿಸುವ ಮೈಕ್ರೋ ಫೈನಾನ್ಸ್ ಗಳು ನೋಟಿಸ್ ನೀಡದೇ ಸಾಲ ವಸೂಲಿ ಮಾಡುವಂತಿಲ್ಲ. ಅಲ್ಲದೆ ನೋಟಿಸ್ ನೀಡದೆ ಕುಟುಂಬದ ಯಾವುದೇ ಸದಸ್ಯನನ್ನು ಬಂಧಿಸಿದರೆ ಅಂಥ ಕಂಪನಿಗಳ ಮಾಲೀಕರನ್ನು ಆರು ತಿಂಗಳು ಜೈಲು ಶಿಕ್ಷೆ ವಿಧಿಸುವ ಅವಕಾಶವೂ ಇದೆ ಎಂದು ತಿಳಿಸಿದರು.
ಸಂಜೆ 5 ಗಂಟೆ ನಂತರ ಸಾಲ ವಸೂಲಾತಿ ಮಾಡದಿರುವುದು, ಸಾಲ ವಸೂಲಿಗೆ ಗೂಂಡಾಗಳು, ರೌಡಿಗಳು, ಹೊರಗುತ್ತಿಗೆ ನೇಮಕ ಮಾಡದಿರುವುದು ಮತ್ತಿತರ ಅಂಶಗಳನ್ನು ಕಾಯ್ದೆಯಲ್ಲಿ ಅಳವಡಿಸಲಾಗಿದೆ. ಇನ್ನು ಮುಂದೆ ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ್ಡಿಯ ದರವನ್ನು ತಮ ಕಚೇರಿಯ ಮುಂದೆ ಬೋರ್ಡ್ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ಜಿಲ್ಲಾ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆರ್ಬಿಐ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ನಿಯಮಗಳನ್ನು ಉಲ್ಲಂಘಿಸಿದರೆ ಜಾಮೀನು ರಹಿತ ಬಂಧನದ ಆದೇಶ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಎಂದರು.
ನಿಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಫೈನಾನ್‌್ಸ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು.
ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? ಎಂದು ತರಾಟೆಗೆ ತೆಗೆದುಕೊಂಡರು.
ಆರ್ಬಿಐನ ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ? ಮರುಪಾವತಿಯ ಸಾಮಥ್ಯವನ್ನು ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಎಂದು ಸಿಡಿಮಿಡಿಗೊಂಡರು.
ನಿಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ ಸರ್ಕಾರ ಸಹಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಆರ್ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್‌್ಸ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ? ಎಂದು ಸಭೆಯಲ್ಲಿದ್ದ ಅಧಿಕಾರಿಗಳನ್ನು ಪ್ರಶ್ನಿಸಿದರು.
ಒಬ್ಬರೇ ಸಾಲಗಾರರು ಬೇರೆ ಬೇರೆ ಗುರುತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ ಎಂದು ಕಂಪನಿಗಳ ಮುಖ್ಯಸ್ಥರಿಗೆ ಪ್ರಶ್ನೆ ಹಾಕಿದರು.ಆರ್ಬಿಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎಂದು ಮೈಕ್ರೋ ಕಂಪನಿಯವರು ಸಮಜಾಯಿಷಿ ನೀಡಿದರು.
ಇದಕ್ಕೆ ಸಚಿವ ಕೃಷ್ಣಭೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಗುಡುಗಿದರು.
ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಸೇರಿದಂತೆ ಆರ್ಬಿಐನ ಉನ್ನತ ಅಧಿಕಾರಿಗಳು, ಸಂಬಂಧಿಸಿದ ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.