ನಂಜನಗೂಡು,ಜ.27-ಸಾಲಕ್ಕೆ ಹೆದರಿ ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಜಯಶೀಲಾ (53)ಎಂದು ಗುರುತಿಸಲಾಗಿದೆ.
ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟುತ್ತಿದ್ದರು ಆದರೆ .ಹಸು ಮೃತಪಟ್ಟಿತ್ತು ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.
ಮನೆಯವವರಿಗೆ ಗೊತ್ತಾದರೆ ತೊಂದರೆಯಾಗುತ್ತದೆ ಎಂದು ವಿಷದ ಮಾತ್ರೆಗಳನ್ನು ತಂದು ತಮ ಜಮೀನಿನಲ್ಲಿ ನುಂಗಿ ಆತಹತ್ಯೆ ಮಾಡಿಕೊಂಡಿದ್ದಾರೆ.ಸಾಲ ತೀರಿಸುವಂತೆ ನೋಟೀಸ್ ನೀಡಲಾಗಿತ್ತು ಇದರಿಂದ ನೊಂದಿದ್ದರು.ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.