Friday, January 31, 2025
Homeರಾಷ್ಟ್ರೀಯ | Nationalಮಹಾಕುಂಭದಲ್ಲಿ ಕಾಲ್ತುಳಿತದ ಹಿನ್ನೆಲೆಯಲ್ಲಿ 2ನೇ ಅಮೃತ ಸ್ನಾನಕ್ಕೆ ತಾತ್ಕಾಲಿಕ ತಡೆ

ಮಹಾಕುಂಭದಲ್ಲಿ ಕಾಲ್ತುಳಿತದ ಹಿನ್ನೆಲೆಯಲ್ಲಿ 2ನೇ ಅಮೃತ ಸ್ನಾನಕ್ಕೆ ತಾತ್ಕಾಲಿಕ ತಡೆ

Akharas extend support to administration, call off ‘Amrit Snan’ after Maha Kumbh stampede

ಪ್ರಯಾಗ್‌ರಾಜ್‌,ಜ.29– ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತ ಘಟನೆ ವರದಿಯಾದ ಬೆನ್ನಲ್ಲೇ 2ನೇ ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಅಖಿಲ ಭಾರತೀಯ ಅಖಾರಾ ಪರಿಷತ್‌ ಅಧ್ಯಕ್ಷ ಮಹಾಂತ ರವೀಂದ್ರ ತಿಳಿಸಿದ್ದಾರೆ.

ಅಮೃತಸ್ನಾನಕ್ಕೆ ಆಗಮಿಸದಂತೆ ಆಡಳಿತಯಂತ್ರ ನಮಗೆ ಮನವಿ ಮಾಡಿಕೊಂಡಿದೆ. ಶ್ರೀಗಳು ಮತ್ತು ನಾಗಾ ಸಾಧುಗಳ ಮೆರವಣಿಗೆ ಮುಂದೆ ಸಾಗುವ ಸಿದ್ಧತೆ ನಡೆದಿದ್ದರೂ, ನಾವು ಪ್ರಸ್ತುತ ಹಿಂದಿರುಗಿದ್ದೇವೆ. ಸದ್ಯಕ್ಕೆ ಅಮೃತಸ್ನಾನ ತಡೆಹಿಡಿಯಲಾಗಿದೆ. ಶೀಘ್ರವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಅಧಿಕಾರಿಗಳೂ ತಿಳಿಸಿದ್ದಾರೆ.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಸಂಗಮದಲ್ಲೇ ಸ್ನಾನ ಮಾಡಬೇಕೆಂಬ ಮನೋಭಾವ ಬೇಡ. ಸ್ಥಳದಲ್ಲಿ ಭಾರೀ ಜನಸಂದಣಿ ಇದ್ದು, ಸುರಕ್ಷತಾ ದೃಷ್ಟಿಯಿಂದ ನಿಮ ಶಿಬಿರಗಳಿಂದ ಹೊರ ಬರದಿರಿ ಎಂದು ಜಗದ್ಗುರು ಸ್ವಾಮಿ ರಾಮಭದ್ರಾಚಾರ್ಯ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

ಘಟನೆ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಂಗಮಕ್ಕೆ ತೆರಳುವ ಬದಲು ಗಂಗಾನದಿ ಸಮೀಪದಲ್ಲಿರುವ ಘಾಟ್‌ನಲ್ಲಿ ಸ್ನಾನ ಮಾಡುವಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಭಕ್ತರು ಆಡಳಿತ ಮಂಡಳಿಯ ಸೂಚನೆಗಳನ್ನು ಪಾಲಿಸಬೇಕು ಮತ್ತು ಕಾನೂವು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು, ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಹೇಳಿದ್ದಾರೆ.

ಅವಘಡದಿಂದ ಎಲ್ಲಾ 13 ಅಖಾಡಗಳು ಸಾಧು ಸಂತರ ಶಾಹಿ ಸ್ನಾನವನ್ನು ರದ್ದುಗೊಳಿಸಿದ್ದಾರೆ. ಮುಂದಿನ ಅಮೃತ ಸ್ನಾನ ಬಸಂತ್‌ ಪಂಚಮಿಯಂದು ನಡೆಯಲಿದೆ. ಜನಸಂದಣಿಯನ್ನು ನಿಯಂತ್ರಿಸಲು ಎಲ್ಲಾ 30 ಪ್ಲಟೂನ್‌ ಸೇತುವೆಗಳನ್ನು ತೆರೆಯಲಾಗಿದೆ. ಪ್ರಯಾಗ್‌ರಾಜ್‌ಗೆ ಕುಂಭ ಮೇಳಕ್ಕೆ ಹೋಗುವವರ ಪ್ರವೇಶವನ್ನು ನಿಲ್ಲಿಸಲಾಗಿದೆ. ರಸ್ತೆಗಳಲ್ಲಿ ಪೊಲೀಸ್‌‍ ಪಡೆಗಳನ್ನು ನಿಯೋಜಿಸಲಾಗಿದೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ ಮಹಾ ಕುಂಭಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ನಗರದಲ್ಲಿ ನಡೆಯುತ್ತಿದ್ದು, ಈ ಕುಂಭಮೇಳವು ಪ್ರತಿ 12 ವರ್ಷಗಳಿಗೊಮೆ ನಡೆಯುವ ಮೇಳವಾಗಿದೆ. ಕುಂಭಮೇಳಕ್ಕೆ ಪ್ರಪಂಚದಾದ್ಯಂತ ಸಾಧು-ಸಂತರು ಮತ್ತು ಭಕ್ತ ಸಾಗರವೇ ಹರಿದುಬರುತ್ತಿದೆ.

ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಕಾಲ್ತುಳಿತದ ನಂತರ, ಅಖಾಡಗಳಲ್ಲಿ ಅಮೃತ ಸ್ನಾನದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಅಖಾಡ ಅಮೃತ್‌ ಸ್ನಾನವನ್ನು ತೆಗೆದುಕೊಳ್ಳುತ್ತದೆಯೇ ಅಥವಾ ಇಲ್ಲವೇ ಎಂಬ ಮಾತುಕತೆ ಇನ್ನೂ ನಡೆಯುತ್ತಿದೆ.

ಏತನಧ್ಯೆ, ಮಹಾಕುಂಭದಲ್ಲಿ ನೆರೆದಿದ್ದ ಅಪಾರ ಭಕ್ತರನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಮಹತ್ವದ ಆದೇಶ ನೀಡಿದ್ದಾರೆ. ಮೇಳದ ಅಧಿಕಾರಿಗಳ ಪ್ರಕಾರ, ಎಲ್ಲಾ ಅಖಾಡಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಸ್ವಲ್ಪ ಸಮಯದ ನಂತರ ಅಮೃತ್‌ ಸ್ನಾನದ ಸಮಯವನ್ನು ನಿಗದಿಪಡಿಸಬಹುದು.

ಮಾಹಿತಿ ಪ್ರಕಾರ, ಕಾಲ್ತುಳಿತದ ನಂತರ, ಮಹಾಕುಂಭದ ವ್ಯವಸ್ಥೆಯಲ್ಲಿ ಆಡಳಿತವು ಬದಲಾವಣೆಗಳನ್ನು ಮಾಡಿದೆ. ಮಹಾಕುಂಭದಲ್ಲಿ ಜನಸಂದಣಿಯನ್ನು ತಿರುಗಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಂಗಮ ನಗರಕ್ಕೆ ಭಕ್ತರ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ. ಜನರ ಗುಂಪನ್ನು ನಗರದ ಹೊರಗೆ ನಿಲ್ಲಿಸಲಾಗಿದೆ.

ಕುಂಭಮೇಳಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಮಾಡಿರುವ ಉತ್ತರ ಪ್ರದೇಶ ಸರ್ಕಾರ, ಧಾರ್ಮಿಕ ಆಚರಣೆಗೆ ಆಗಮಿಸುವ ಕೋಟ್ಯಂತರ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಹಲವು ಕ್ರಮಗಳು ಹಾಗೂ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ.

RELATED ARTICLES

Latest News