Friday, January 31, 2025
Homeರಾಷ್ಟ್ರೀಯ | Nationalಕೇಂದ್ರ ಸರ್ಕಾರದ ಶರವೇಗದ ಸಾಧನೆಗೆ ರಾಷ್ಟ್ರಪತಿ ಪ್ರಶಂಸೆ

ಕೇಂದ್ರ ಸರ್ಕಾರದ ಶರವೇಗದ ಸಾಧನೆಗೆ ರಾಷ್ಟ್ರಪತಿ ಪ್ರಶಂಸೆ

Budget Session 2025: Full text of President Droupadi Murmu's customary speech

ನವದೆಹಲಿ,ಜ.31- ಕೇಂದ್ರ ಸರ್ಕಾರವು ಅಭೂತಪೂರ್ವ ಸಾಧನೆ ಮಾಡುವ ಮೂಲಕ ಭಾರತದ ಸುವರ್ಣ ಅವಧಿಗೆ ಹೊಸ ಶಕ್ತಿ ನೀಡುತ್ತಿದೆ. ಇಂದು ದೇಶದ ಪ್ರಮುಖ ನಿರ್ಧಾರಗಳು ಮತ್ತು ನೀತಿಗಳನ್ನು ಅಸಾಧಾರಣ ವೇಗದಲ್ಲಿ ಜಾರಿಗೆ ತರುವುದನ್ನು ನಾವು ನೋಡುತ್ತಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಕೊಂಡಾಡಿದ್ದಾರೆ.

ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಹಿನ್ನಲೆಯಲ್ಲಿ ಇಂದಿನಿಂದ ಆರಂಭವಾದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ 40 ನಿಮಿಷಗಳ ಭಾಷಣದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದರು.

ಪ್ರಮುಖವಾಗಿ ಮಹಿಳೆಯರ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶ, ಆಯುಶಾನ್ ಭಾರತ್ ಯೋಜನೆಯಡಿ 70 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಆರೋಗ್ಯ ವಿಮೆ, ಮಧ್ಯಮ ವರ್ಗದವರಿಗೆ ಮನೆ ಹೊಂದುವ ಕನಸು ನನಸು, ಬುಡಕಟ್ಟು ಜನಾಂಗದವರಿಗೆ ವಿಶೇಷ ಯೋಜನೆ ಸೇರಿದಂತೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು.

ತಮ ಭಾಷಣದ ಪ್ರಾರಂಭದಲ್ಲಿ ಸಂವಿಧಾನವನ್ನು ಅಂಗೀಕರಿಸಿ 75 ವರ್ಷಗಳನ್ನು ಪೂರೈಸಿದ ಬಗ್ಗೆ ಪ್ರಸ್ತಾಪಿಸಿ ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕರುಡು ಸಮಿತಿಯ ಸದಸ್ಯರನ್ನು ಸರಿಸಿದರು.
ಇದೇ ವೇಳೆ ಮೌನಿ ಅಮಾವಾಸ್ಯೆಯ ದಿನದಂದು ಪ್ರಯಾಗ್ರಾಜ್ನಲ್ಲಿ ಮಹಾಕುಂಭದ ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿ, ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ತಮ ಭಾಷಣದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಕೆಲಸಗಳನ್ನು ಪ್ರಸ್ತಾಪಿಸಿದ ರಾಷ್ಟ್ರಪತಿಗಳು, ಇಂದು ನನ್ನ ಸರ್ಕಾರ ಅಭೂತಪೂರ್ವ ಸಾಧನೆಗಳ ಮೂಲಕ ಭಾರತದ ಅಭಿವೃದ್ಧಿ ಪಯಣದ ಈ ಸುವರ್ಣ ಅವಧಿಗೆ ಹೊಸ ಶಕ್ತಿ ನೀಡುತ್ತಿದೆ. ಮೂರನೇ ಅವಧಿಯಲ್ಲಿ ಮೂರು ಪಟ್ಟು ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ. ಇಂದು ದೇಶವು ಪ್ರಮುಖ ನಿರ್ಧಾರಗಳು ಮತ್ತು ನೀತಿಗಳನ್ನು ಅಸಾಧಾರಣ ವೇಗದಲ್ಲಿ ಜಾರಿಗೆ ತರುವುದನ್ನು ನೋಡುತ್ತಿದೆ ಎಂದು ಹೇಳಿದರು.

ಇದೇ ವೇಳೆ, ಇಂದು ಎಲ್ಲರಿಗೂ ವಸತಿ ಕಲ್ಪಿಸುವ ಜತೆಗೆ ಶಿಕ್ಷಣ, ಉದ್ಯೋಗಕ್ಕೂ ಒತ್ತು ನೀಡಲಾಗುತ್ತಿದೆ. ಇದುವರೆಗೆ 2.25 ಕೋಟಿ ಮಾಲೀಕತ್ವ ಕಾರ್ಡ್ ವಿತರಿಸಲಾಗಿದೆ. ರೈತರ ಹಿತದೃಷ್ಟಿಯಿಂದ ಅನೇಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರವು ಬಡವರು ಮತ್ತು ಯುವಜನರಿಗಾಗಿ ಕೆಲಸ ಮಾಡುತ್ತಿದೆ ಎಂದರು.

ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮುರ್ಮು, ದೇಶವು ವೇಗವಾಗಿ ಪ್ರಗತಿಯಲ್ಲಿದೆ, ರೈತರು ಮತ್ತು ಬಡವರು ಸರ್ಕಾರದ ಆದ್ಯತೆಯಾಗಿದೆ, ಸರ್ಕಾರವು ಒಂದು ದೇಶ, ಒಂದು ಚುನಾವಣೆ ಕಲ್ಪನೆಯ ಮೇಲೆ ಕೆಲಸ ಮಾಡುತ್ತಿದೆ. ಸ್ತ್ರೀಶಕ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಶ್ರಮಿಸುತ್ತಿದೆ. ಸರಕಾರಿ ಯೋಜನೆಗಳಿಂದ ಬಡವರಿಗೆ ಗೌರವ ಸಿಕ್ಕಿದೆ. ಸರಕಾರದ ಮಂತ್ರ ಸಬ್ಕಾ ಸಾಥ್, ಸಬ್ಕಾ ವಿಕಾಸ್. ಈ ಸರಕಾರದಲ್ಲಿ ಆಯುಷಾನ್ ಭಾರತ್ ಯೋಜನೆಯಡಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಆರು ಕೋಟಿ ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ವಿಸ್ತರಿಸುವ ಮೂಲಕ ಮೂರು ಕೋಟಿ ಹೆಚ್ಚುವರಿ ಕುಟುಂಬಗಳಿಗೆ ಹೊಸ ಮನೆಗಳನ್ನು ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಐದು ಲಕ್ಷದ ಮೂವತ್ತಾರು ಸಾವಿರ ಕೋಟಿ ರೂಪಾಯಿ ಖರ್ಚು ಮಾಡುವ ಯೋಜನೆ ಇದೆ ಎಂದು ಅವರು ಹೇಳಿದರು.

ಭಾರತದಲ್ಲಿ ಎಐಗಾಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆಯೂ ಚರ್ಚಿಸಿದ ಅವರು, ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಭಾರತದ ಕೊಡುಗೆಯನ್ನು ಮುಂದಕ್ಕೆ ತೆಗೆದುಕೊಂಡು, ಭಾರತ ಎಐ ಮಿಷನ್ ಅನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಕ್ವಾಂಟಮ್ ಮಿಷನ್ನೊಂದಿಗೆ, ಈ ಅತ್ಯಾಧುನಿಕ ತಂತ್ರಜ್ಞಾನದಲ್ಲಿ ಭಾರತವು ವಿಶ್ವದ ಪ್ರಮುಖ ರಾಷ್ಟ್ರಗಳ ಸಾಲಿನಲ್ಲಿ ತನ್ನ ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ.

ಕೋವಿಡ್ ಮತ್ತು ಅದರ ನಂತರ ಮತ್ತು ಯುದ್ಧದಂತಹ ಜಾಗತಿಕ ಕಾಳಜಿಗಳ ಹೊರತಾಗಿಯೂ ಭಾರತೀಯ ಆರ್ಥಿಕತೆಯು ತೋರಿಸಿದ ಸ್ಥಿರತೆ ಮತ್ತು ಸ್ಥಿತಿಸ್ಥಾಪಕತ್ವವು ದೇಶದ ಶಕ್ತಿಗೆ ಸಾಕ್ಷಿಯಾಗಿದೆ. ಸುಲಭ ವ್ಯಾಪಾರವನ್ನು ಉತ್ತೇಜಿಸಲು ನನ್ನ ಸರ್ಕಾರವು ಹಲವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ಬುಡಕಟ್ಟು ಸಮಾಜದ ಐದು ಕೋಟಿ ಜನರಿಗಾಗಿ ಧರ್ತಿ ಆಬಾ ಜಾಂಬತಿ ಗ್ರಾಮ ಉತ್ಕರ್ಷ್ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಇದಕ್ಕಾಗಿ 80 ಸಾವಿರ ಕೋಟಿ ರೂ. ಆಯುಷಾನ್ ಭಾರತ್ ಯೋಜನೆಯಡಿ, ಎಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಆರು ಕೋಟಿ ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆಯನ್ನು ನೀಡಲು ನಿರ್ಧರಿಸಲಾಗಿದೆ. ಅವರಿಗೆ ಪ್ರತಿ ವರ್ಷ 5 ಲಕ್ಷ ರೂಪಾಯಿ ಆರೋಗ್ಯ ರಕ್ಷಣೆ ಸಿಗಲಿದೆ ಎಂದರು.

ಯುವಕರು ಮತ್ತು ಶಿಕ್ಷಣಕ್ಕಾಗಿ ಕೇಂದ್ರದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ರಾಷ್ಟ್ರಪತಿಗಳು, ಇಂದು ನಮ ಯುವ ಸ್ಟಾರ್ಟಪ್ಗಳು ಕ್ರೀಡೆಯಿಂದ ಬಾಹ್ಯಾಕಾಶದವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ದೇಶಕ್ಕೆ ಕೀರ್ತಿ ತರುತ್ತಿದ್ದಾರೆ. ಒಙ ಭಾರತ್ ಪೋರ್ಟಲ್ ಮೂಲಕ ಲಕ್ಷಾಂತರ ಯುವಕರು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು.

ನನ್ನ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣ ವ್ಯವಸ್ಥೆಯನ್ನು ಸಿದ್ಧಪಡಿಸುತ್ತಿದೆ. ಯಾರೂ ಶಿಕ್ಷಣದಿಂದ ವಂಚಿತರಾಗದಂತೆ ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಹದಿಮೂರು ಭಾರತೀಯ ಭಾಷೆಗಳಲ್ಲಿ ವಿವಿಧ ನೇಮಕಾತಿ ಪರೀಕ್ಷೆಗಳನ್ನು ನಡೆಸುವ ಮೂಲಕ ಭಾಷಾ ಅಡೆತಡೆಗಳನ್ನು ಸಹ ತೆಗೆದುಹಾಕಲಾಗಿದೆ. ಒಲಿಂಪಿಕ್‌್ಸ ಅಥವಾ ಪ್ಯಾರಾಲಿಂಪಿಕ್‌್ಸ ಆಗಿರಲಿ, ಭಾರತೀಯ ತಂಡಗಳು ಎಲ್ಲೆಡೆ ಉತ್ತಮ ಪ್ರದರ್ಶನ ನೀಡಿವೆ. ಫಿಟ್ ಇಂಡಿಯಾ ಆಂದೋಲನ ನಡೆಸುವ ಮೂಲಕ, ನಾವು ಬಲವಾದ ಯುವ ಶಕ್ತಿಯನ್ನು ರಚಿಸುತ್ತಿದ್ದೇವೆ ಎಂದು ಕೊಂಡಾಡಿದರು.

ನನ್ನ ಸರ್ಕಾರವು ಮಹಿಳಾ ನಾಯಕತ್ವದಲ್ಲಿ ದೇಶವನ್ನು ಸಬಲೀಕರಣಗೊಳಿಸುತ್ತದೆ. ನಾರಿ ಶಕ್ತಿ ವಂದನ್ ಕಾಯ್ದೆಯ ಮೂಲಕ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಈ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ನಡಿ 91 ಲಕ್ಷಕ್ಕೂ ಹೆಚ್ಚು ಸ್ವ-ಸಹಾಯ ಗುಂಪುಗಳನ್ನು ಸಬಲೀಕರಣ ಗೊಳಿಸಲಾಗುತ್ತಿದೆ. ದೇಶದ ಹತ್ತು ಕೋಟಿಗೂ ಹೆಚ್ಚು ಮಹಿಳೆಯರು ಇದರೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೆ ಒಟ್ಟು 9 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತವನ್ನು ಬ್ಯಾಂಕ್ ಲಿಂಕ್ ಮೂಲಕ ವಿತರಿಸಲಾಗಿದೆ.

ನಮ ಬ್ಯಾಂಕಿಂಗ್ ಮತ್ತು ಡಿಜಿ ಪಾವತಿ ಸಖಿಗಳು ದೂರದ ಪ್ರದೇಶಗಳಲ್ಲಿರುವ ಜನರನ್ನು ಹಣಕಾಸು ವ್ಯವಸ್ಥೆಯೊಂದಿಗೆ ಸಂಪರ್ಕಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಕೃಷಿ ಸಖಿಗಳು ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುತ್ತಿದ್ದು, ಪಶು ಸಖಿಗಳ ಮೂಲಕ ನಮ ಜಾನುವಾರುಗಳನ್ನು ಬಲಪಡಿಸಲಾಗುತ್ತಿದೆ. ಡ್ರೋನ್ ದೀದಿ ಯೋಜನೆಯು ಮಹಿಳೆಯರ ಆರ್ಥಿಕ ಮತ್ತು ತಾಂತ್ರಿಕ ಸಬಲೀಕರಣದ ಮಾಧ್ಯಮವಾಗಿದೆ ಎಂದು ಹೇಳಿದರು.

ಯುವಕರ ಶಿಕ್ಷಣ ಮತ್ತು ಅವರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನಮ ಸರ್ಕಾರ ವಿಶೇಷ ಗಮನ ನೀಡಿದೆ. ಉನ್ನತ ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನಮಂತ್ರಿ ವಿದ್ಯಾಲಕ್ಷಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಒಂದು ಕೋಟಿ ಯುವಕರಿಗೆ ಅಗ್ರ ಐನೂರು ಕಂಪನಿಗಳಲ್ಲಿ ಇಂಟರ್ನ್ಶಿಪ್ ಅವಕಾಶಗಳನ್ನು ನೀಡಲಾಗುವುದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಸರ್ಕಾರ 70 ಸಾವಿರ ಕೋಟಿ ರೂ. ದೇಶವು ಅಟಲ್ ಜಿಯವರ ಜನ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ, ಅವರ ಅಟಲ್ ಗ್ರಾಮ ಸಡಕ್ ಯೋಜನೆಯು ಹೊಸ ಎತ್ತರವನ್ನು ತಲುಪುತ್ತಿದೆ ಎಂದರು.

ಮಧ್ಯಮ ವರ್ಗದವರಿಗಾಗಿ ಸರ್ಕಾರ ಕೆಲಸ ಮಾಡಿದೆ. ನಮ ಸರ್ಕಾರ ಇತ್ತೀಚೆಗೆ ಎಂಟನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಏಕೀಕೃತ ಪಿಂಚಣಿ ಯೋಜನೆಯಡಿ ನೌಕರರಿಗೆ ಶೇ.50ರಷ್ಟು ಪಿಂಚಣಿ ನೀಡಲು ನಿರ್ಧರಿಸಲಾಗಿದೆ. ಮಧ್ಯಮ ವರ್ಗದವರ ಸ್ವಂತ ಮನೆ ಕನಸನ್ನು ನನಸು ಮಾಡಲು ಸರ್ಕಾರ ಬದ್ಧವಾಗಿದೆ. ರೇರಾ ಕಾನೂನನ್ನು ಮಾಡಿ ಜನರಿಗೆ ಮನೆಗಳ ಮೇಲೆ ಸಬ್ಸಿಡಿ ನೀಡಲಾಗುತ್ತಿದೆ. ಉಡಾನ್ ಯೋಜನೆ ಮೂಲಕ ಜನರ ವಿಮಾನ ಪ್ರಯಾಣದ ಕನಸು ನನಸಾಗಿದೆ. ಪ್ರತಿಯೊಂದು ವಿಷಯದ ಅಧ್ಯಯನಕ್ಕೆ ಸೀಟುಗಳ ಸಂಖ್ಯೆಯಲ್ಲಿ ಬಹುಪಟ್ಟು ಹೆಚ್ಚಳದ ಲಾಭ ಮಧ್ಯಮ ವರ್ಗದವರಿಗೂ ಸಿಕ್ಕಿದೆ ಎಂದು ಹೇಳಿದರು.

RELATED ARTICLES

Latest News