ಬೆಂಗಳೂರು,ಜ.31-ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಗೃಹ ಬಳಕೆ ಎಲ್.ಪಿ.ಜಿ ಸಿಲಿಂಡರ್ಗಳನ್ನುಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ಚಿಕ್ಕ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ಗಳಿಗೆ ಆಕ್ರಮವಾಗಿ ರೀಫಿಲ್ಲಿಂಗ್ ಮಾಡಿ, ಮಾರಾಟದಲ್ಲಿ ತೊಡಗಿದ್ದ ಅಂಗಡಿಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ 80 ಸಿಲಿಂಡರ್ಗಳು, 3 ರೀಫಿಲ್ಲಿಂಗ್ ರಾಡ್ ಹಾಗೂ ಒಂದು ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಯನಗರ 1ನೇ ಬ್ಲಾಕ್, ಸೋಮೇಶ್ವರನಗರದಲ್ಲಿರುವ ಅಂಗಡಿ ಮತ್ತು ಗೋದಾಮಿನಲ್ಲಿ ಈ ದಂಧೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.ನಂತರ ದಾಳಿ ಮಾಡಿ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ವ್ಯಕ್ತಿಗಳು ತಲೆಮರೆಸಿಕೊಂಡಿದ್ದಾರೆ ಇವರ ಪತ್ತೆ ಕಾರ್ಯ ಮುಂದುವರೆದಿದೆ.
ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಯಾವ ಸಂದರ್ಭದಲ್ಲಾದರು ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ ಸಾರ್ವಜನಿಕ ಜೀವ ಮತ್ತು ಆಸ್ತಿ-ಪಾಸ್ತಿಗೆ ಹಾನಿವುಂಟಾಗುವ ಸಂಭವವಿದೆಯೆಂದು ಗೊತ್ತಿದ್ದರು ಸಹ ಯಾವುದೇ ಸುರಕ್ಷತಾ ನಿಯಮಗಳನ್ನು ಅನುಸರಿಸದೇ, ಅನಧಿಕೃತವಾಗಿ ಅಕ್ರಮ ಚಟುವಟಿಕೆಯಲ್ಲಿ ಆರೋಪಿಗಳು ಬಾಗಿಯಾಗಿದ್ದಾರೆ ಎಂದು ಹೇಳಿದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ/ಸಿಬ್ಬಂದಿ ಯಶಸ್ವಿಯಾಗಿ ಕೈಗೊಂಡಿದ್ದಾರೆ ಎಂದು ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.