ಬೆಂಗಳೂರು, ಜ.31- ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರು ನಗರದ ಫ್ರೀಡಂಪಾರ್ಕ್ನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇಲ್ಲಿವರೆಗೂ ಕೂಡ ತಮ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಪ್ರತಿಭಟನೆ ಮುಂದುವರೆಸಲಾಗಿದೆ.ಐಸಿಡಿಎಸ್ ಯೋಜನೆ ಪ್ರಾರಂಭ ವಾಗಿ 50 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕನಿಷ್ಟ ವೇತನ ನೀಡಬೇಕು.
ದೇಶದಲ್ಲಿ ಮಹಿಳೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಎದುರಿಸುತ್ತಿರುವ ಅಪೌಷ್ಠಿಕತೆ, ರಕ್ತಹೀನತೆ, ಆರೋಗ್ಯ ಸಮಸ್ಯೆ ತೊಡೆದು ಹಾಕುವ ನಿಟ್ಟಿನಲ್ಲಿ 1975 ಅಕ್ಟೋಬರ್ 2ರಂದು ಪ್ರಾರಂಭಿಸಲಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ಪರಿಣಾಮಕಾರಿಯಾಗಲು ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೂ ಕೂಡ ನಮ ಬೇಡಿಕೆಗಳನ್ನು ಮಾತ್ರ ಸರ್ಕಾರ ಈಡೇರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಐಸಿಡಿಎಸ್ ಯೋಜನೆಯಲ್ಲಿ ಮೂರರಿಂದ ಆರು ವರ್ಷದ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ, ಪೂರಕ ಪೌಷ್ಠಿಕ ಆಹಾರ ವಿತರಣೆ, ಮಕ್ಕಳಿಗೆ ಚುಚ್ಚುಮದ್ದು, ಭಾಗ್ಯಲಕ್ಷ್ಮಿ ಅರ್ಜಿ, ಮಾತೃವೃಂದ ಅರ್ಜಿಯನ್ನು ಫಲಾನುಭವಿಗಳಿಗೆ ನೀಡುವುದು ಸೇರಿದಂತೆ ಮತ್ತಿತರ ಕೆಲಸಗಳನ್ನು ನಾವು ಮಾಡುತ್ತಿದ್ದು, ನಮ ಶ್ರಮಕ್ಕೆ ತಕ್ಕ ಪ್ರತಿಫಲ ಇಲ್ಲದಂತಾಗಿದೆ.
ಕೊರೊನಾ ಸಂದರ್ಭದಲ್ಲಿ ವಾರಿಯರ್ಸ್ಗಳಾಗಿ ಜೀವದ ಹಂಗು ತೊರೆದು ಆರೋಗ್ಯ ಇಲಾಖೆಯವರ ಜತೆ ಸೇರಿ ಜಾಗೃತಿ ಮೂಡಿಸಿ ಕೆಲಸ ಮಾಡಿದ್ದೇವೆ. ಆದರೆ, ನಮ ಸೇವೆಯನ್ನು ಗಣನೀಯವಾಗಿ ಪರಿಗಣಿಸದೆ ನಮಗೆ ಸೂಕ್ತ ವೇತನ ಹಾಗೂ ಇತರೆ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕುಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಶಾ ಆರ್ಯಕರ್ತೆಯರು, ಸಹಾಯಕಿಯರು ಬಂದು ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸೌಜನ್ಯಕ್ಕೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ನಮ ನೋವನ್ನು ಕೇಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ನಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.