ನವದೆಹಲಿ,ಫೆ.1- ಗ್ರಾಮೀಣ ಆರ್ಥಿಕತೆಗೆ ಒತ್ತು ನೀಡುವ ಉದ್ದೇಶದಿಂದ ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ಹೊಸ ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಮೇಲಿನ ಭಾಷಣದಲ್ಲಿ ಅವರು, ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸುವ ಯೋಜನೆ ಹಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಅನುಕೂಲವಾಗಲಿದೆ. ಪೋಸ್ಟ್ ಆಫೀಸ್‌ಗಳನ್ನು ಬಲವರ್ಧನೆಗೊಳಿಸುವುದರ ಜೊತೆಗೆ ಅವುಗಳಿಗೆ ಮರುಜೀವ ನೀಡಿ ಬೃಹತ್ ಉದ್ಯಮವನ್ನಾಗಿ ಪರಿವರ್ತಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಛತ್ತೀಸ್ಗಢದಲ್ಲಿ ಹಕ್ಕಿ ಜ್ವರ ಹೆಚ್ಚಳ : 17,000 ಕೋಳಿಗಳು, ಕ್ವಿಲ್ಗಳ ನಾಶ
- ಬೆಸ್ಟ್ ಬಜೆಟ್ : ಎಫ್ಕೆಸಿಸಿಐ ಮೆಚ್ಚುಗೆ
- ಬೆಂಗಳೂರಲ್ಲಿ ಬೀಗ ಹಾಕಿದ ಮನೆಗಳಿಗೆ ಪೊಲೀಸರ ನಿಗಾ
- Budget 2025 : ಬಟ್ಟೆಗಳ ಮೇಲೆ ಸುಂಕ ಕಡಿತ, ಉತ್ಪಾದನೆ ಹೆಚ್ಚುವ ನಿರೀಕ್ಷೆ
- ಸರ್ಕಾರಿ ಶಾಲೆಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕ, 10,000 ವೈದ್ಯಕೀಯ ಸೀಟು ಹೆಚ್ಚಳ