Saturday, February 1, 2025
Homeರಾಜ್ಯಉತ್ಪನ್ನಗಳು, ಬ್ಯಾಂಕಿಂಗ್ ಸೇವೆಗಳು ಕನ್ನಡದಲ್ಲಿರಲಿ : ಕರವೇ ಹಕ್ಕೊತ್ತಾಯ

ಉತ್ಪನ್ನಗಳು, ಬ್ಯಾಂಕಿಂಗ್ ಸೇವೆಗಳು ಕನ್ನಡದಲ್ಲಿರಲಿ : ಕರವೇ ಹಕ್ಕೊತ್ತಾಯ

Products, banking services should be in Kannada

ಬೆಂಗಳೂರು, ಫೆ.1- ರಾಜ್ಯದಲ್ಲಿ ಮಾರಾಟವಾಗುವ ಮತ್ತು ಬಳಕೆಯಾಗುವ ಎಲ್ಲ ಉತ್ಪನ್ನಗಳ ಮೇಲೆ ಶೇ.60ರಷ್ಟು ಬರಹಗಳು ಕನ್ನಡದಲ್ಲಿರಬೇಕು. ಗ್ಯಾಸ್ ಸಿಲಿಂಡರ್ಗಳ ಮೇಲೆ ಕನ್ನಡ ಅಂಕಿ, ಕನ್ನಡ ಬಾರದ ವಲಸಿಗರಿಗೆ ಕನ್ನಡ ಭಾಷೆ ಕಲಿಯುವಂತೆ ಮಾಡುವುದು ಸೇರಿದಂತೆ ಮೂರು ಬೇಡಿಕೆಗಳನ್ನಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಅಭಿಯಾನ ಆರಂಭಿಸಲಾಯಿತು.

ಕರ್ನಾಟಕದಲ್ಲಿ ಮಾರಾಟವಾಗುವ/ಬಳಕೆಯಾಗುವ ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60ರಷ್ಟು ಬರಹಗಳು ಕನ್ನಡದಲ್ಲಿಯೇ ಇರಬೇಕು. ತಾವು ಬಳಕೆ ಮಾಡುವ ವಸ್ತುಗಳ ಹೆಸರೇನು, ಪ್ರಮಾಣವೇನು, ಅವುಗಳ ತಯಾರಿಕೆಗೆ ಏನನ್ನು ಬಳಸಲಾಗಿದೆ ಎಂಬೆಲ್ಲ ವಿಷಯಗಳು ಕನ್ನಡಿಗರಿಗೆ ಕಡ್ಡಾಯವಾಗಿ ಗೊತ್ತಾಗಬೇಕು ಎಂದು ಒತ್ತಾಯಿಸಲಾಯಿತು.

ಇನ್ನು ಗ್ಯಾಸ್ ಸಿಲಿಂಡರ್ಗಳ ಮೇಲೆ ಹಿಂದಿ ಭಾಷೆಯಲ್ಲಿ ಜಾಗೃತಿ ಬರಹಗಳಿದ್ದು, ಅದನ್ನು ನಮ ಗ್ರಾಮೀಣ ಭಾಗದ ಮಹಿಳೆಯರು ಅರ್ಥ ಮಾಡಿಕೊಳ್ಳಲು ಸಾಧ್ಯವೇ ಮತ್ತು ನಮ ಕನ್ನಡಿಗರ ಮೇಲೆ ಹೇರುತ್ತಿರುವ ಈ ದೌರ್ಜನ್ಯ ಸರಿಯೇ ಎಂದು ನಾರಾಯಣಗೌಡ ಪ್ರಶ್ನಿಸಿದರು.
ಕರ್ನಾಟಕದಲ್ಲಿ ಮಾರಾಟವಾಗುವ ಯಾವುದೇ ರೀತಿಯ ಉತ್ಪನ್ನಗಳ ಮೇಲೆ ಕನ್ನಡದ ಅಕ್ಷರಗಳನ್ನು ಬೂದುಗಾಜಲ್ಲಿ ಹುಡುಕಿದರೂ ಸಿಗುವುದಿಲ್ಲ. ಎಲ್ಲೋ ಬೆರಳೆಣಿಕೆಯ ಕೆಲವು ವಸ್ತುಗಳ ಮೇಲೆ ಕನ್ನಡ ಇರಬಹುದು. ಶೇ.100ಕ್ಕೆ 99ರಷ್ಟು ವಸ್ತುಗಳ ಮೇಲಿನ ಬರೆಹಗಳು ಇಂಗ್ಲಿಷ್ನಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ವಾಸಿಸುವ ವಲಸಿಗರಿಗೆ, ಕನ್ನಡ ಬಾರದವರಿಗೆ ಅನುಕೂಲವಾಗಲು ಉತ್ಪನ್ನಗಳ ಮೇಲೆ ಕನ್ನಡದ ಜೊತೆ ಇಂಗ್ಲಿಷ್ನಲ್ಲೂ ಮಾಹಿತಿ ಮುದ್ರಣವಾದರೆ ನಮ ಆಕ್ಷೇಪಣೆ ಏನೂ ಇರುತ್ತಿರಲಿಲ್ಲ. ನೂರಕ್ಕೆ ನೂರೂ ಇಂಗ್ಲಿಷ್ ಆದರೆ ಅದನ್ನು ಹೇಗೆ ಸಹಿಸಿಕೊಳ್ಳುವುದು ಎಂದರು.

ಜನಸಂಖ್ಯಾ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೆ ತಂದ ರಾಜ್ಯ ಕರ್ನಾಟಕ. ಆದರೆ ಉತ್ತರದ ರಾಜ್ಯಗಳಲ್ಲಿ ಜನಸಂಖ್ಯಾ ಸ್ಫೋಟ ನಡೆದೇ ಇದೆ. ಉತ್ತರದ ರಾಜ್ಯಗಳ ಹೆಚ್ಚುವರಿ ಜನರನ್ನು ದಕ್ಷಿಣಕ್ಕೆ ತುಂಬುವ ಕಾರ್ಯ ಹಲವು ವರ್ಷಗಳಿಂದ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಯಾವುದೇ ರೀತಿಯ ವಸ್ತುಗಳ ಮಾರಾಟದ ಏಜೆನ್ಸಿಗಳು ಪರಭಾಷಿಕರ ಕೈ ಸೇರುತ್ತಿದೆ. ಅಷ್ಟೇ ಅಲ್ಲ, ಈ ಪರಭಾಷಿಕರು ತಮ ಏಜೆನ್ಸಿಗಳಲ್ಲಿ ತಮ ರಾಜ್ಯದ ಜನರುಗಳನ್ನೇ ಉದ್ಯೋಗಿಗಳನ್ನಾಗಿ ಸೇರಿಸಿಕೊಳ್ಳುತ್ತಿದ್ದಾರೆ. ಕನ್ನಡಿಗರಿಗೆ ಏಜೆನ್ಸಿಯೂ ಇಲ್ಲ, ಏಜೆನ್ಸಿಗಳಲ್ಲಿ ನೌಕರಿಯೇ ಇಲ್ಲದಂತಾಗುತ್ತಿದೆ. ಕರ್ನಾಟಕ ಪರಭಾಷಿಕರ ಪಾಲಿಗೆ ಸುರಕ್ಷಿತ ಸ್ವರ್ಗವಾಗಿ ಹೋಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಎಲ್ಲ ಬಗೆಯ ರಾಷ್ಟ್ರೀಯ/ ಖಾಸಗಿ/ ಗ್ರಾಮೀಣ /ಸಹಕಾರಿ ಬ್ಯಾಂಕ್ಗಳು, ಫೈನಾನ್ಸ್ ಗಳು, ಚಿನ್ನದ ಅಡಮಾನ ಸಂಸ್ಥೆಗಳು, ಜೀವವಿಮಾ ಸಂಸ್ಥೆಗಳು, ಆರೋಗ್ಯ ವಿಮಾ ಸಂಸ್ಥೆಗಳು ಮತ್ತು ಇತರ ಯಾವುದೇ ಸ್ವರೂಪದ ಹಣಕಾಸು ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ. 100ರಷ್ಟು ಹ್ದುೆಗಳು ಮತ್ತು ಇತರೆ ಹುದ್ದೆಗಳಲ್ಲಿ ಶೇ. 60ರಷ್ಟು ಹ್ದುೆಗಳು ಕನ್ನಡಿಗರಿಗೆ ನೀಡಬೇಕು. ಈ ಎಲ್ಲ ಸಂಸ್ಥೆಗಳು ಬಳಸುವ/ಗ್ರಾಹಕರಿಗೆ ನೀಡುವ ಎಲ್ಲ ದಾಖಲೆಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

RELATED ARTICLES

Latest News