Sunday, February 2, 2025
Homeರಾಷ್ಟ್ರೀಯ | Nationalಶಾಲೆಯಲ್ಲಿ ಟಾಯ್ಲೆಟ್‌ ಕಮೋಡ್‌ ನೆಕ್ಕಿಸಿದ ಸಹಪಾಠಿಗಳು, ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ

ಶಾಲೆಯಲ್ಲಿ ಟಾಯ್ಲೆಟ್‌ ಕಮೋಡ್‌ ನೆಕ್ಕಿಸಿದ ಸಹಪಾಠಿಗಳು, ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ

Class 9 Kerala boy dies by suicide, mother says he was made to lick toilet seat

ಕೊಚ್ಚಿ, ಫೆ. 2- ಶಾಲೆಯಲ್ಲಿ ಸಹಪಾಠಿಗಳು ಟಾಯ್ಲೆಟ್‌ ಕಮೋಡ್‌ ನೆಕ್ಕಿಸಿ ರ್ಯಾಗಿಂಗ್‌ ಮಾಡಿದ್ದರಿಂದ ಮನನೊಂದ 15 ವರ್ಷದ ವಿದ್ಯಾರ್ಥಿಯೊಬ್ಬ ಆತಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆತಹತ್ಯೆ ಮಾಡಿಕೊಂಡ ಬಗ್ಗೆ ಸುದ್ದಿಯಾಗಿತ್ತು. ಆದರೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್‌ ದೊರೆತಿದೆ.

ಬಾಲಕನಿಗೆ ಶಾಲೆಯಲ್ಲಿ ಭಯಾನಕವಾಗಿ ರ್ಯಾಗಿಂಗ್‌ ಮಾಡಲಾಗಿತ್ತು ಎಂದು ಆತನ ತಾಯಿ ಆರೋಪಿಸಿದ್ದಾರೆ. ಟಾಯ್ಲೆಟ್‌ ಸೀಟ್‌ ನೆಕ್ಕುವಂತೆ ಮಾಡಿದ್ದಲ್ಲದೆ, ಫ್ಲಷ್‌ ಮಾಡುವಾಗ ಕಮೋಡ್‌‍ನಲ್ಲಿ ಆತನ ತಲೆಯನ್ನು ಮುಳುಗಿಸಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ. 15 ವರ್ಷದ ವಿದ್ಯಾರ್ಥಿ ಮಿಹಿರ್‌ ಅಹದ್‌ ಕೆಲವು ದಿನಗಳ ಹಿಂದೆ 26ನೇ ಮಹಡಿಯ ಫ್ಲಾಟ್‌‍ನಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಇದೀಗ ಆತನ ತಾಯಿ ಗಂಭೀರ ಆರೋಪ ಮಾಡಿದ್ದಾರೆ.

ಮಿಹಿರ್‌ ಏಕೆ ಅಂತಹ ಕಠಿಣ ನಿರ್ಧಾರ ಕೈಗೊಂಡ ಎಂಬುದನ್ನು ಅರ್ಥಮಾಡಿಕೊಳ್ಳಲು ನನ್ನ ಪತಿ ಮತ್ತು ನಾನು ಮಾಹಿತಿ ಸಂಗ್ರಹಿಸಲು ಪ್ರಾರಂಭಿಸಿದೆವು. ಆತನ ಸ್ನೇಹಿತರು, ಸಹಪಾಠಿಗಳು ಮತ್ತು ಸಾಮಾಜಿಕ ಮಾಧ್ಯಮ ಸಂದೇಶಗಳನ್ನು ಪರಿಶೀಲಿಸಿದಾಗ ಆತ ಅನುಭವಿಸಿದ ಭಯಾನಕ ವಾಸ್ತವ ಗಮನಕ್ಕೆ ಬಂತು.

ಶಾಲೆಯಲ್ಲಿ ಮತ್ತು ಶಾಲಾ ಬಸ್‌‍ನಲ್ಲಿ ವಿದ್ಯಾರ್ಥಿಗಳ ಗುಂಪಿನಿಂದ ಕ್ರೂರವಾಗಿ ರ್ಯಾಗಿಂಗ್‌, ಬೆದರಿಸುವಿಕೆ ಮತ್ತು ದೈಹಿಕ ಹಲ್ಲೆ ಮಾಡಲಾಗಿತ್ತು ಹೀಗಾಗಿ ನನ್ನ ಮಗ ಆತಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದಾರೆ.

ಘಟನೆ ಸಂಬಂಧ ಪೊಲೀಸರು ಆತಹತ್ಯೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಮಿಹಿರ್‌ ತಾಯಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಕಚೇರಿ ಮತ್ತು ಕೇರಳ ಪೊಲೀಸ್‌‍ ಮುಖ್ಯಸ್ಥರಿಗೆ ಪತ್ರ ಬರೆದು, ತಮ ಮಗನ ಸಾವಿನ ಬಗ್ಗೆ ತಕ್ಷಣದ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ. ಮಿಹಿರ್‌ ಜನವರಿ 15 ರಂದು ಶಾಲೆಯಿಂದ ಮರಳಿದ ಕೇವಲ ಒಂದು ಗಂಟೆಯ ನಂತರ ಕೊಚ್ಚಿಯ ತ್ರಿಪುಣಿತರಾದಲ್ಲಿನ ತಮ 26 ನೇ ಮಹಡಿಯ ಫ್ಲಾಟ್‌ನಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದ.

RELATED ARTICLES

Latest News