ಬೆಂಗಳೂರು, ಫೆ.3- ಮಂಡ್ಯದ ವಿಸಿ ನಾಲೆಗೆ ಕಾರು ಉರುಳಿ ಬಿದ್ದು ಒಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ನಾಪತ್ತೆಯಾಗಿರುವ ಘಟನೆ ಶಿವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಈ ಕಾರು ಮಂಡ್ಯ ತಾಲೂಕು ಮಾಚಹಳ್ಳಿ ಬಳಿ ಇಂದು ಮಧ್ಯಾಹ್ನ 1.30ರ ಸುಮಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿದೆ. ಪರಿಣಾಮ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನುಳಿದ ಇಬ್ಬರು ಕಣರೆಯಾಗಿದ್ದು, ಅವರುಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಶಿವಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದು, ನಾಲೆಯಿಂದ ಕಾರನ್ನು ಮೇಲೆತ್ತಲು ಸ್ಥಳೀಯರ ನೆರವಿನಿಂದ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.