ಆನೇಕಲ್/ಹುಬ್ಬಳ್ಳಿ, ಫೆ.4-ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕಿ ದುಷ್ಟ ಶಕ್ತಿಗಳಿಗೆ ಬುದ್ಧಿ ಕಲಿಸಿ ಹೆಡೆ ಮುರಿ ಕಟ್ಟಲು ಪೊಲೀಸರು ಮುಂದಾಗಿದ್ದಾರೆ. ಇಂದು ಹುಬ್ಬಳ್ಳಿ ಹಾಗೂ ಆನೇಕಲ್ನಲ್ಲಿ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಫೈರಿಂಗ್ ನಡೆದಿದ್ದು, ಇದರಲ್ಲಿ ಕೊಲೆ ಆರೋಪಿಗಳು ಹಾಗೂ ದರೋಡೆಕೋರರು ಗುಂಡೇಟಿನಿಂದ ಗಾಯಗೊಂಡಿದ್ದಾರೆ.
ಆನೇಕಲ್ ವರದಿ:
ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದಾಗ ಆತರಕ್ಷಣೆಗಾಗಿ ಇನ್ಸ್ಪೆಪೆಕ್ಟರ್ ಹಾರಿಸಿದ ಗುಂಡು ತಗುಲಿ ರೌಡಿ ಸಿಕ್ಕಿ ಬಿದ್ದಿದ್ದಾನೆ. ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.ಘಟನೆ ವಿವರ: ದೊಮಸಂದ್ರ ಗ್ರಾಮದಲ್ಲಿ ಮಾಜಿ ರೌಡಿ ಶೀಟರ್ ವೆಂಕಟೇಶ್ನನ್ನು ಜ.28 ರಂದು ರಾತ್ರಿ ಶ್ರೀನಿವಾಸ್ ಉರುಫ್ ಗುಬ್ಬಚ್ಚಿ ಸೀನನ ಗ್ಯಾಂಗ್ ಕೊಲೆ ಮಾಡಿ ಪರಾರಿಯಾಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸರ್ಜಾಪುರ ಠಾಣೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು. ಇಂದು ಬೆಳಗಿವ ಜಾವ ದೊಮಸಂದ್ರದ ಬಳಿ ರೌಡಿ ಶೀಟರ್ ಶ್ರೀನಿವಾಸ್ ಗುಬ್ಬಚ್ಚಿ ಸೀನ ಇರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದೆ.ತಕ್ಷಣ ಇನ್ಸ್ಪೆಪೆಕ್ಟರ್ ನವೀನ್ ಕುಮಾರ್ ಅವರು ಸಿಬ್ಬಂದಿಯೊಂದಿಗೆ ಆರೋಪಿಯನ್ನು ಬಂಧಿಸಲು ಸ್ಥಳಕ್ಕೆ ಹೋದಾಗ ಪೊಲೀಸರನ್ನು ಕಂಡು ರೌಡಿ ಶ್ರೀನಿವಾಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಆ ಸಂದರ್ಭದಲ್ಲಿ ಇನ್ಸ್ಪೆಪೆಕ್ಟರ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಆರೋಪಿಗೆ ಎಚ್ಚರಿಸಿದ್ದಾರೆ. ಪೊಲೀಸರ ಮಾತಿಗೆ ಕಿವಿಗೊಡದೆ ಸಿಬ್ಬಂದಿ ಇರ್ಫಾನ್ ಮೇಲೆ ರೌಡಿ ಶ್ರೀನಿವಾಸ್ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಇನ್ಸ್ಪೆಪೆಕ್ಟರ್ನವೀನ್ ಅವರು ಆತರಕ್ಷಣೆಗಾಗಿ ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿ ಕುಸಿದುಬಿದ್ದಿದ್ದಾನೆ.
ಪೊಲೀಸರು ಆರೋಪಿಯನ್ನು ಸ್ತುತುವರೆದು ವಶಕ್ಕೆ ಪಡೆದು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.ಕಾರ್ಯಾಚರಣೆ ವೇಳೆ ಗಾಯಗೊಂಡಿರುವ ಸಿಬ್ಬಂದಿ ಇರ್ಫಾನ್ ಅವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ಅವರು ಭೆೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.28 ರಂದು ನಡೆದ ವೆಂಕಟೇಶ್ ಎಂಬಾತನ ಕೊಲೆ ಪ್ರಕರಣದಲ್ಲಿ ಎಂಟರಿಂದ ಹತ್ತು ಮಂದಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯಿದೆ. ಸುಫಾರಿ ತೆಗೆದುಕೊಂಡು ಕೊಲೆ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದುತಿಳಿಸಿದರು.
ವಿಜಯನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶ್ರೀನಿವಾಸ್ ಮೇಲೆ ಎರಡು ಕೊಲೆ ಪ್ರಕರಣಗಳಿವೆ. ಆರ್ಮ್ಸೌ ಆಕ್ಟ್ ನಲ್ಲಿ ಕೂಡ ಪ್ರಕರಣಗಳು ದಾಖಲಾಗಿವೆ. ಒಂದು ಪ್ರಕರಣದಲ್ಲಿ ಹಲವು ವರ್ಷ ಈತನಿಗೆ ಶಿಕ್ಷೆಯಾಗಿತ್ತು. ಹಲವು ಬಾರಿ ಜೈಲಿಗೆ ಹೋಗಿ ಬಂದರೂ ಮತ್ತೆ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದನು. ಸರ್ಜಾಪುರ ಸೇರಿ ಒಟ್ಟು ನಾಲ್ಕು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಅವರು ಹೇಳಿದರು. ಹತ್ತಾರು ಪ್ರಕರಣಗಳಲ್ಲಿ ರೌಡಿ ಶ್ರೀನಿವಾಸ್ ಭಾಗಿಯಾಗಿದ್ದಾನೆ. ಗ್ಯಾಂಗ್ ಕಟ್ಟಿಕೊಂಡು ಈ ರೀತಿಯ ಅಪರಾಧ ಕೃತ್ಯಗಳನ್ನೂ ಎಸಗುತ್ತಿದ್ದ ಎಂದು ಅವರು ತಿಳಿಸಿದರು.
ಹುಬ್ಬಳ್ಳಿ ವರದಿ:
ನಗರದ ಹೊರ ವಲಯದ ಗಬ್ಬರ ಬಳಿ ಜೈನ್ ಮಂದಿರದಲ್ಲಿ ಕಳ್ಳತನ, ಮನೆಗಳ್ಳತನ ಹಾಗೂ ಬೈಕ್ ಸವಾರರನ್ನು ತಡೆದು ಸುಲಿಗೆ ಮಾಡುತ್ತಿದ್ದ ಗುಜರಾತ್ ಮೂಲದ ಇಬ್ಬರು ದರೋಡೆಕೋರರಿಗೆ ಬೆಂಡಿಗೇರಿ ಠಾಣೆ ಪೊಲೀಸರು ಬೆಳಗ್ಗೆ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಐವರ ತಂಡ ಗುಜರಾತ್ನಿಂದ ಇಲ್ಲಿಗೆ ಬಂದು ಮಂದಿರ, ಮನೆಗಳ್ಳತನ, ಸುಲಿಗೆ ಮಾಡಿ ತಲೆಮರೆಸಿಕೊಳ್ಳುತ್ತಿದ್ದರು. ಇತ್ತೀಚೆಗೆ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆ ಪ್ರಕರಣಗಳ ಹಿನ್ನೆಲೆಯಲ್ಲಿ ಅವಳಿ ನಗರದ 17ಕಡೆ ನಾಕಾಬಂದಿ ಹಾಕಲಾಗಿತ್ತು. ತಡರಾತ್ರಿ ಬೈಕ್ನಲ್ಲಿ ಹೋಗುತ್ತಿದ್ದ ಕುಂದಗೋಳ ಮೂಲದ ವ್ಯಕ್ತಿಯನ್ನು ಈ ತಂಡ ಅಡ್ಡಗಟ್ಟಿ ಬೈಕ್ ಸೇರಿ ನಗದು, ಮೊಬೈಲ್ ಕಿತ್ತುಕೊಂಡು, ಹಲ್ಲೆ ಮಾಡಿ ಪರಾರಿಯಾಗಿದ್ದರು. ಇದಾದ ಸ್ವಲ್ಪ ಸಮಯದಲ್ಲೇ ಇದೇ ರೀತಿ ಇನ್ನೊಬ್ಬರ ಮೇಲೆ ದಾಳಿ ಮಾಡಿ ಸುಲಿಗೆ ಮಾಡಿದ್ದರು.
ನಂತರ ಮಂಟೂರು ರಸ್ತೆಯಲ್ಲಿ ಶಾರಿಕ್ ಎಂಬುವವರ ಮನೆ ಮೇಲೆ ಕಲ್ಲು ತೂರಾಟ ಮಾಡಿ ದರೋಡೆಗೆ ಯತ್ನಿಸಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿ ಕಾರ್ಯಾಚರಣೆಗೆ ಇಳಿದಾಗ ಬೈಕ್ನಲ್ಲಿ ವೇಗವಾಗಿ ಹೋಗುತ್ತಿದ್ದವರನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಆತ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಈ ವೇಳೆ ಆತರಕ್ಷಣೆಗಾಗಿ ಪೊಲೀಸ್ ಇನ್ಸ್ಪೆಪೆಕ್ಟರ್ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿದಾಗ ಅದು ಆರೋಪಿಗಳಿಬ್ಬರ ಕಾಲಿಗೆ ಬಡಿದಿದೆ.
ಅವರನ್ನು ವಶಕ್ಕೆ ಪಡೆದಾಗ ಅವರು ಗುಜರಾತ್ ಮೂಲದ ದಿಲೀಪ್ ಮತ್ತು ನೀಲೇಶ್ ಎಂದು ಗುರುತಿಸಲಾಗಿದೆ. ಈ ತಂಡದ ಮೂವರು ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಇದೇ ತಂಡ ಇದೇ ರೀತಿ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
ಹುಬ್ಬಳ್ಳಿ ಗಬ್ಬರನ ಜೈನ ಮಂದಿರದ ಹುಂಡಿಯಲ್ಲಿದ್ದ 4ಲಕ್ಷ ರೂ. ಕದ್ದಿದ್ದರು. ಎಪಿಎಂಸಿ-ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಅಂಗಡಿಗಳಿಗೆ ಕನ್ನ ಹಾಕಿದ್ದರು. ಅಲ್ಲದೇ ಇವರ ಮೇಲೆ ಗದಗ, ಬಳ್ಳಾರಿ, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ. ಇಬ್ಬರ ಬಂಧನ ಕಾರ್ಯಾಚರಣೆಯಲ್ಲಿ ಬೆಂಡಿಗೇರಿ ಠಾಣೆ ಪಿಎಸ್ಐ ಅಶೋಕ, ಪಿಸಿಗಳಾದ ಶರಣು, ಸೋಮು ಮೇಟಿ ಗಾಯಗೊಂಡಿದ್ದು, ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿಪಿ ಮಹಾನಿಂಗ ನಂದಗಾಂವಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು ಮತ್ತು ಕೆಎಂಸಿಆರ್ಐ ಆಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳು ಸಿಬ್ಬಂದಿಗಳ ಆರೋಗ್ಯ ವಿಚಾರಿಸಿದ್ದಾರೆ.