ನಿತ್ಯ ನೀತಿ : ಹೊಗಳಿದರೂ, ಖಂಡಿಸಿದರೂ ಎರಡೂ ಒಳ್ಳೆಯದೇ, ಹೊಗಳಿಕೆ ಸೂ ರ್ತಿ ನೀಡಿದರೆ, ಖಂಡನೆ ತಪ್ಪನ್ನು ತಿದ್ದುಕೊಳ್ಳಲು ಅವಕಾಶ ನೀಡುತ್ತದೆ.
ಪಂಚಾಂಗ – ಬುಧವಾರ, 28-01-2026
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ದಶಮಿ / ನಕ್ಷತ್ರ: ಕೃತ್ತಿಕಾ / ಯೋಗ: ಬ್ರಹ್ಮಾ / ಕರಣ: ವಣಿಜ ಸೂರ್ಯೋದಯ – 06.47
ಸೂರ್ಯಾಸ್ತ – 6.19
ರಾಹುಕಾಲ – 12.00- 1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ.
ವೃಶ್ಚಿಕ: ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
