Thursday, February 6, 2025
Homeಜಿಲ್ಲಾ ಸುದ್ದಿಗಳು | District Newsಚಿಕ್ಕಬಳ್ಳಾಪುರ | Chikkaballapurಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ

Man commits suicide due to micro finance harassment

ಚಿಕ್ಕಬಳ್ಳಾಪುರ – ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಅನೇಕರು ಆತಹತ್ಯೆಗೆ ಶರಣಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದೀಗ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರು ಆತಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗಿರೀಶ್‌ (26) ಆತಹತ್ಯೆಗೆ ಶರಣಾದ ವ್ಯಕ್ತಿ. ಈತ ವಿವಿಧ ಸಂಸ್ಥೆಗಳಲ್ಲಿ ಸುಮಾರು 13 ಲಕ್ಷ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.ಮೃತ ಗಿರೀಶ್‌ ಕಳೆದ 2 ವರ್ಷಗಳಿಂದ ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡಿಕೊಂಡು ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾಗಿದ್ದು, ಸಾಲ ತೀರಿಸಲಾಗದೆ ಮನನೊಂದು ಆತಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಟ್ರ್ಯಾಕ್ಟರ್‌ ಖರೀದಿ ಮಾಡಲು ಸಾಲ ಮಾಡಿದ್ದ ಗಿರೀಶ್‌ ಸಾಲ ಕಟ್ಟಲಾಗದೆ ಟ್ರ್ಯಾಕ್ಟರ್‌ ಸಹ ಸೀಜ್‌ ಮಾಡಲಾಗಿತ್ತು. ಈ ಎಲ್ಲ ಕಾರಣಗಳಿಂದ ಆತಹತ್ಯೆ ಮಾಡಿಕೊಂಡಿರಬಹುದು ಎಂದು ಊಹೆ ಮಾಡಲಾಗಿದೆ.

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ಈ ಸಂಬಂಧ ಗುಡಿಬಂಡೆ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News