ಬೆಂಗಳೂರು,ಫೆ.6- ಬ್ಯಾಂಕ್ಗೆ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.
ಶಿಕ್ಷೆಯ ಪ್ರಮಾಣವನ್ನು ನಾಳೆ ನ್ಯಾಯಾಲಯ ಪ್ರಕಟಿಸಲಿದ್ದು, ಆರೋಪಿಗಳಾದ ಕೃಷ್ಣಯ್ಯ ಶೆಟ್ಟಿ, ಶ್ರೀನಿವಾಸು, ಮುನಿರಾಜು, ಎಂಟಿವಿ ರೆಡ್ಡಿ ಅವರಿಗೆ ಮೇಲೆ ಜಾಮೀನು ಸಿಗದಿದ್ದರೆ ಜೈಲು ಪಾಲಾಗುವ ಸಾಧ್ಯತೆ ಇದೆ.
ಶುಕ್ರವಾರ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದೇವೆ ಎಂದು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಗಜಾನನ ಭಟ್ ತಿಳಿಸಿದ್ದಾರೆ. ತಕ್ಷಣವೇ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಸಿಬಿಐಗೆ ಸೂಚನೆ ನೀಡಿದ್ದಾರೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ ಎಸ್ಬಿಐ ಬ್ಯಾಂಕ್ಗೆ ವಂಚಿಸಿದ ಆರೋಪದ ಮೇಲೆ ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು. ಇದು ಬ್ಯಾಂಕ್ ವಂಚನೆ ಪ್ರಕರಣವಾಗಿದ್ದರಿಂದ ಸಿಬಿಐ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿತ್ತು.
ತಮ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ತನಿಖೆಯನ್ನು ರದ್ದುಪಡಿಸಬೇಕೆಂದು ಕೃಷ್ಣಯ್ಯ ಶೆಟ್ಟಿ ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ನೀವು ವಿಶೇಷ ನ್ಯಾಯಾಲಯದಲ್ಲೇ ಇದನ್ನು ಇತ್ಯರ್ಥಗೊಳಿಸಬೇಕೆಂದು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಅವರು ಸೂಚಿಸಿ ತನಿಖೆ ಮುಂದುವರೆಸಲು ಆದೇಶಿಸಿದರು.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ಕೃಷ್ಣಯ್ಯ ಶೆಟ್ಟಿ ಹಾಗೂ ಇತರ ಆರೋಪಿಗಳ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿದ್ದರೂ ಆರೋಪಿಗಳನ್ನು ಬಂಧಿಸದಂತೆ ನಿರ್ಬಂಧ ವಿಧಿಸಿತ್ತು.
ಏನಿದು ಪ್ರಕರಣ?:
1993ರಲ್ಲಿ ಬಾಲಾಜಿಕೃಪಾ ಎಂಟರ್ಪ್ರೈಸಸ್ನ ಮಾಲೀಕರಾಗಿದ್ದ ಕೃಷ್ಣಯ್ಯ ಶೆಟ್ಟಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿದ್ದರು. ಬಿಟಿಎಸ್, ಕೆಎಸ್ಆರ್ಟಿಸಿ, ಬಿಎಸ್ಎನ್ಎಲ್, ಐಟಿಐ, ಎಚ್ಎಎಲ್, ಬಿಇಎಂಎಲ್, ಎಡಿಇ ಸಂಸ್ಥೆಗಳ 181 ಮಂದಿಗೆ 7.17 ಕೋಟಿ ರೂ.ಬ್ಯಾಂಕ್ ಸಾಲ ನಕಲಿ ದಾಖಲೆ ಸೃಷ್ಟಿಸಿ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ.
ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು.ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್ಶೀಟ್ ಸಿದ್ಧಪಡಿಸಿತ್ತು.
ಅಂದಿನ ಮುಖ್ಯ ವಿಚಕ್ಷಣೆ ದಳದ ಮುಖ್ಯಸ್ಥ ಆರ್.ಡಿ.ನಾಯ್ಡು ನೀಡಿರುವ ದೂರು ಆಧರಿಸಿ, ಸಿಬಿಐ ತನಿಖೆ ಕೈಗೆತ್ತಿಕೊಂಡಿತ್ತು. ಬ್ಯಾಂಕ್ ಖಾತೆಗಳು, ಸಾಲ ವಿತರಣೆಯಾದ ಮಾಹಿತಿ ಕಲೆ ಹಾಕಿ ಸಿಬಿಐ ಚಾರ್ಜ್ಶೀಟ್ ಹಾಕಿತ್ತು.
ಸಾಲ ಕೊಡಿಸುವಾಗ ನೌಕರರಲ್ಲದವರನ್ನು ನೌಕರರೆಂದು ಸುಳ್ಳು ವೇತನ ರಸೀದಿ, ಪ್ರಮಾಣಪತ್ರ ಕೊಟ್ಟು 263 ಪ್ರಕರಣಗಳಲ್ಲಿ 15.61 ಕೋಟಿ ಸಾಲ ಪಡೆದಿದ್ದು, 33 ಪ್ರಕರಣಗಳಲ್ಲಿ 1.47 ಕೋಟಿ ರೂ.ಬಾಕಿ ಪಾವತಿ ಮಾಡಬೇಕಿದೆ.
181 ಮಂದಿಬೇನಾಮಿ ಹೆಸರಲ್ಲಿ ಯೋಜನೆಯ ಲಾಭ ಪಡೆದಿದ್ದಾರೆ. ಬೆಂಗಳೂರು ಗ್ರಾಮಾಂತರ ನಗರ ಶಾಖೆಯ ಎಸ್ಬಿಎಂನ ವ್ಯವಸ್ಥಾಪಕ ಎಂ.ಟಿ.ವಿ.ರೆಡ್ಡಿ ಇದರಲ್ಲಿ ಶಾಮೀಲಾಗಿದ್ದು,ಒಂದು ಸಾಲ ಬಿಡುಗಡೆಗೆ 20 ಸಾವಿರ ರೂ. ಹಣ ಪಡೆದಿದ್ದಕ್ಕೆ ಸಾಕ್ಷ್ಯ ದೊರೆತಿದೆ. ನಾಗವಾರದ ಬಳಿ ನಿವೇಶನ ಎಂದು ತೋರಿಸಿದ್ದ ಜಾಗ ಮೊದಲೇ ಕೆಐಎಡಿಬಿಗೆ ಸೇರಿದ್ದಾಗಿತ್ತು. ಇದು ವಂಚನೆಗೆ ಕಾರಣ ಎಂದು ಸಿಬಿಐ ಚಾರ್ಜ್ಶೀಟ್ನಲ್ಲಿ ಸುದೀರ್ಫ ಮಾಹಿತಿ ನೀಡಿತ್ತು.
ಬೆಂಗಳೂರು ಉತ್ತರ ತಾಲ್ಲೂಕಿನ ನಾಗವಾರ ಗ್ರಾಮದ ಸರ್ವೇ ನಂಬರ್ 98ರಲ್ಲಿ 3 ಎಕರೆಗೂ ಹೆಚ್ಚಿನ ಜಾಗದಲ್ಲಿ ಲೇ ಔಟ್ ನಿರ್ಮಾಣಕ್ಕಾಗಿ ಸಾಲ ಪಡೆಯಲಾಗಿತ್ತು. ಈ ಪ್ರದೇಶದಲ್ಲಿ ಗೃಹ ನಿರ್ಮಾಣ ಯೋಜನೆಗೆ ಕೃಷ್ಣಯ್ಯ ಶೆಟ್ಟಿ ಬಾಲಾಜಿ ಎಂಟರ್ಪ್ರೈಸಸ್ ಹೆಸರಿನಲ್ಲಿ 2003ರಿಂದ 2008ರವರೆಗೆ ಚಾಲ್ತಿ ಖಾತೆಯಲ್ಲಿ ಎಸ್ಬಿಎಂನಿಂದ ಸಾಲ ಪಡೆದಿದ್ದಾರೆ. ಇದಕ್ಕಾಗಿ ಅವರು ತೊಟ್ಟಿ ದಾಖಲೆ ಸೃಷ್ಟಿಸಿದ್ದಾರೆ ಎಂಬುದು ಸಿಬಿಐ ಆರೋಪವಾತ್ತು.
ಚಾರ್ಜ್ಶೀಟ್ನಲ್ಲಿ ಏನಿದೆ?:
ಸಾಲ ಕೊಡಿಸುವಾಗ ನೌಕರರಲ್ಲದವರನ್ನು ನೌಕರರೆಂದು ಸುಳ್ಳು ವೇತನ ರಸೀದಿ, ಪ್ರಮಾಣಪತ್ರ ನೀಡಿದ್ದಾರೆ. 263 ಪ್ರಕರಣಗಳಲ್ಲಿ 15.61 ಕೋಟಿ ಸಾಲ ಪಡೆದಿದ್ದು, 33 ಪ್ರಕರಣಗಳಲ್ಲಿ 1.47 ಕೋಟಿ ರೂ.ಬಾಕಿ ಪಾವತಿ ಮಾಡಬೇಕಿದೆ. ಬೇನಾಮಿ ಹೆಸರಲ್ಲಿ ಯೋಜನೆಯ ಲಾಭ ಪಡೆದವರು 181 ಮಂದಿ. ಬೆಂಗಳೂರಿನ ಗಾಂಧಿನಗರ ಶಾಖೆಯ ಎಸ್ಬಿಎಂನ ವ್ಯವಸ್ಥಾಪಕ ಎಂ.ಟಿ.ವಿ.ರೆಡ್ಡಿ ಶಾಮೀಲಾಗಿದ್ದು, ಒಂದು ಸಾಲ ಬಿಡುಗಡೆಗೆ 20 ಸಾವಿರ ರೂ. ಪಡೆದದ್ದಕ್ಕೆ ಸಾಕ್ಷ್ಯ ದೊರೆತಿದೆ. ನಾಗವಾರದ ಬಳಿ ನಿವೇಶನ ಎಂದು ತೋರಿಸಿದ್ದ ಜಾಗ ಮೊದಲೇ ಕೆಐಎಡಿಬಿಗೆ ಸ್ವಾನವಾಗಿತ್ತು. ಇದು ವಂಚನೆ ನಡೆಯಲು ಕಾರಣ
ಎಂಬ ಮಾಹಿತಿ ಚಾರ್ಜ್ಶೀಟ್ನಲ್ಲಿ ಇದೆ.
ಕೃಷ್ಣಯ್ಯ ಶೆಟ್ಟಿ, ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್ಪಿಸಿ ಸೆಕ್ಷನ್ 13(1)ಡಿ, 13(2)ರಡಿ ಮೊಕದ್ದಮೆ ದಾಖಲಿಸಿದೆ.