ಮಂಡ್ಯ,ಫೆ.9- ಖಾಸಗಿ ಬಸ್ಸೊಂದು ಟೈಯರ್ ಬ್ಲಾಸ್ಟ್ ಆಗಿ ಒಳಗಿದ್ದ 18 ಪ್ರಯಾಣಿಕರು ಹೊರಗೆ ಬಂದು ಜೀವ ಉಳಿಸಿಕೊಂಡ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ರಸ್ತೆಯಲ್ಲಿ ಮಧ್ಯರಾತ್ರಿ ನಡೆದಿದೆ.
ಅಶೋಕ್ ಅಂಡ್ ಲಾಜೆಸ್ಟಿಕ್ ಟ್ರಾವೆಲ್‌್ಸಗೆ ಸೇರಿದ ಕೆಎ.01- 5736 ಸಂಖ್ಯೆಯ ಬಸ್ ಬೆಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ವೇಳೆ ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸ್ಯಾಂಜೋ ಆಸ್ಪತ್ರೆ ಸಮೀಪ ಟೈಯರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ.
ಈ ವೇಳೆ ಎಚ್ಚೆತ್ತ ಚಾಲಕ ಕೂಡಲೇ ಬಸ್ ನಿಲ್ಲಿಸಿದ್ದಾರೆ. ನಂತರ ಅದರಲ್ಲಿದ್ದ 18 ಮಂದಿ ಪ್ರಯಾಣಿಕರು ತಮ ಲಗೇಜ್ ಹಾಗು ವಸ್ತುಗಳನ್ನು ಹೊರಗೆ ಎಸೆದು ನಂತರ ಬಸ್‌ನಿಂದ ಇಳಿದಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದೆ.
ವಿಚಾರ ತಿಳಿಯುತ್ತಿದ್ದಂತೆ ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಡಿಎಸ್‌ಪಿ ರಾಘವೇಂದ್ರ ಕೂಡ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರಿಗೆ ನೆರವಾಗಿದ್ದಾರೆ.
ಅಗ್ನಿಶಾಮಕ ತಂಡ ಬೆಂಕಿ ನಂದಿಸುವಷ್ಟರಲ್ಲಿ ಬಸ್ ಬಹುತೇಕ ಸುಟ್ಟು ಕರಕಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಟ್ರಾವೆಲ್‌್ಸ ಸಂಸ್ಥೆ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದೆ. ಈ ಸಂಬಂಧ ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.