ಮಂಡ್ಯ,ಫೆ.9- ರಾಜಕೀಯ ಕಾರಣದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಾಳಾಗುವುದು ಬೇಡ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಳಕಳಿಯ ಮನವಿ ಮಾಡಿದರು.
ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದಲ್ಲಿ ನಡೆದ ಊರಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾನವ ಸಂಬಂಧಗಳು, ರಕ್ತ ಸಂಬಂಧಗಳು ಹಳ್ಳಿಗಳಲ್ಲಿ ಗಾಢವಾಗಿದ್ದವು. ನೆರೆಹೊರೆಯವರು ಚೆನ್ನಾಗಿರಲಿ ಎಂಬ ಭಾವನೆ ಎಲ್ಲರಲ್ಲಿಯೂ ಇತ್ತು. ಈ ಕಾರಣದಿಂದ ಗ್ರಾಮಗಳು ನೆಮದಿಯಾಗಿದ್ದವು. ಈಗ ಆ ನೆಮದಿ ಸಂತೋಷ ದೂರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಹಿಂದೆ ಹಳ್ಳಿಗಳು ಎಂದರೆ ನೆಮದಿಯ ತಾಣಗಳು ಆಗಿದ್ದವು. ಯಾರ ಮನೆಯಲ್ಲಿ ಶುಭ ಕಾರ್ಯಗಳು ನಡೆದರೆ ಇಡೀ ಊರಿಗೆ ಊರೇ ಸೇರುತ್ತಿತ್ತು. ಪಂಕ್ತಿ ಭೋಜನ ಇರುತ್ತಿತ್ತು. ಅಜ್ಜ, ಅಜ್ಜಿ, ತಂದೆ ತಾಯಿಯ ಜತೆ ಅಂತಹ ಶುಭ ಕಾರ್ಯಗಳಲ್ಲಿ ಪಾಲ್ಗೊಂಡ ನೆನಪು ನನಗಿನ್ನೂ ಹಚ್ಚ ಹಸಿರಾಗಿದೆ. ಹಾಗೆಯೇ ಯಾರಿಗೆ ಕಷ್ಟ ಬಂದರೂ ಇಡೀ ಊರೇ ಮಿಡಿಯುತ್ತಿತ್ತು.
ಅಂತಹ ವಾತಾವರಣದಿಂದ ನಾವು ವಂಚಿತರಾಗಿದ್ದೇವೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.ಹಳ್ಳಿ ಹಬ್ಬಗಳು, ಜಾತ್ರೆಗಳು ಜನರನ್ನು ಒಂದು ಮಾಡುತ್ತವೆ. ಸಾಮರಸ್ಯ ಮೂಡಿಸುತ್ತಿವೆ. ರಾಜಕೀಯ ಚುಣಾವಣೆಗೆ ಸೀಮಿತವಾಗಿರಲಿ ಎಂದು ಹೇಳಿದರು.
ಮಾಜಿ ಶಾಸಕರ ಸುರೇಶ್ ಗೌಡ, ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ಗ್ರಾಮಸ್ಥರು ಸಚಿವರನ್ನು ಆತೀಯವಾಗಿ ಸನಾನಿಸಿದರು.ಇದಕ್ಕೂ ಮೊದಲು ಸಚಿವರು ಬೆಟ್ಟದ ಮಲ್ಲೇನಹಳ್ಳಿ ಗ್ರಾಮದ ಶ್ರೀ ಆದಿಶಕ್ತಿ ಹುಚ್ಚಮದೇವಿ ದೇವಸ್ಥಾನಕ್ಕೆ ತೆರಳಿ ಅಮನವರ ದರ್ಶನ ಪಡೆದರು.