Thursday, February 27, 2025
Homeರಾಜ್ಯಫೆ.24ಕ್ಕೆ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು

ಫೆ.24ಕ್ಕೆ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ತೀರ್ಪು

Illegal ore mining case verdict against Anand Singh on Feb. 24

ಬೆಂಗಳೂರು,ಫೆ.10-ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ಫೆಬ್ರವರಿ 24ರಂದು ಪ್ರಕಟವಾಗಲಿದೆ.

ಪ್ರಕರಣದ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಅಂತಿಮ ತೀರ್ಪು ಪ್ರಕಟಿಸುವ ದಿನಾಂಕವನ್ನು ಮುಂದೂಡಿದೆ. ನ್ಯಾ.ಸಂತೋಷ್ ಗಜಾನನ ಭಟ್ ಅವರ ಏಕಸದಸ್ಯ ಪೀಠವು ಫೆಬ್ರವರಿ 24ಕ್ಕೆ ಅಂತಿಮ ತೀರ್ಪನ್ನು ಪ್ರಕಟಿಸುವುದಾಗಿ ಹೇಳಿದೆ.

ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಸಿ ವರದಿ ಆಧರಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿತ್ತು.

16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ, ಜೈಸಿಂಗ್ಪುರದ ಬಳಿ ಎಸ್ವಿಕೆ ಫ್ಲಾಟ್ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ 2015ರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಡಿವೈಎಸ್ಪಿ ವೇಣುಗೋಪಾಲ್ ನೇತೃತ್ವದ ತಂಡ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು.

RELATED ARTICLES

Latest News