ಮೈಸೂರು,ಫೆ.11– ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ನಿಂದಾಗಿ ಇಲ್ಲಿನ ಉದಯಗಿರಿ ಉದ್ವಿಗ್ನಗೊಂಡಿದೆ.ಸಾಮಾಜಿಕ ಜಾಲ ತಾಣದಲ್ಲಿನ ಅವಹೇಳನಕಾರಿ ಚಿತ್ರ ಪೋಸ್ಟ್ ಮಾಡಿದ್ದ ಘಟನೆಯಿಂದ ಪೊಲೀಸ್ ಠಾಣೆ ಬಳಿ ಗುಂಪೊಂದು ತಡರಾತ್ರಿ ಕಲ್ಲು ತೂರಾಟ ನಡೆಸಿದ ಪರಿಣಾಮ ಕೆಲ ಕಾಲ ಉದ್ವಿಗ್ನಗೊಂಡ ಘಟನೆ ನಡೆದಿದೆ.
ತಡರಾತ್ರಿ ಅನ್ಯಕೋಮಿನ ಯುವಕರು ಜಮಾಯಿಸಿ ಆರೋಪಿಯನ್ನು ನಮಗೆ ಒಪ್ಪಿಸಬೇಕೆಂದು ಉದಯಗಿರಿ ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದಾಗ ದಾಂಧಲೆ ನಡೆದಿದೆ.ಪರಿಸ್ಥಿತಿ ಕೈ ಮೀರಿ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದಾಗ ಕೆಲ ಕಿಡಿಗೇಡಿಗಳು ಕೆಲ ವಸ್ತುಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದ್ದಾರೆ ಈ ವೇಳೆ ಎಸಿಪಿ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ 14 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದು, ಪೊಲೀಸ್ ವಾಹನಗಳು ಸೇರಿ 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಗಾಯಗೊಂಡಿರುವ ಎಸಿಪಿ ಶಾಂತಮಲ್ಲಪ್ಪ ಹಾಗೂ ಇನ್ಸ್ ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿ ಸಿಬ್ಬಂದಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಆರೋಪಿಗಳ ಪತ್ತೆ ಕಾರ್ಯ :ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳ ಮೊರೆ ಹೋಗಿದ್ದಾರೆ. ತಡರಾತ್ರಿ ಏಕಾಏಕಿ ಠಾಣೆ ಮುಂದೆ ಸಾವಿರಾರು ಮಂದಿ ಜಮಾಯಿಸಿ ಕಲ್ಲುತೂರಾಟ ನಡೆಸಿದ್ದು ಅವರ ಪತ್ತೆಗೆ ಠಾಣೆ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಗುರುತು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ.
ಬಂಧನ :ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬಾತನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಬಗ್ಗೆ ಪೊಲೀಸರು ಅಧಿಕೃತ ಫೇಸ್ಬುಕ್ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಜಾಲ ತಾಣದಲ್ಲಿ ಅರೇಬಿಕ್ ಬಾಷೆಯಲ್ಲಿದ್ದ ಚಿತ್ರವನ್ನು ನೋಡಿ ಆರೋಪಿ ಟೕಕಿಸಿದ್ದ ಎಂದು ಮೂಲಗಳು ತಿಳಿಸಿವೆ.
ಘಟನೆ ವಿವರ :
ಪೋಸ್ಟರ್ ಕುರಿತು ನಿನ್ನೆ ರಾತ್ರಿ ಮಾಹಿತಿ ತಿಳಿದ ಅನ್ಯಕೋಮಿನ ಸಮುದಾಯದ ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತಡೆದು ಪ್ರತಿಭಟನೆಗೆ ಮುಂದಾದರು.ಈ ವೇಳೆ ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿತಲ್ಲದೆ, ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಪೊಲೀಸರು ಸ್ಪಂದಿಸಿ ಸ್ವಯಂ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿ,ಪ್ರಕಟಣೆ ಹೊರಡಿಸಿದ್ದರು. ಆದರೂ ಕೆಲವರ ಆಕ್ರೋಶ ತಣ್ಣಗಾಗಿರಲಿಲ್ಲ .
ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಕೂಡಲೇ ಹೆಚ್ಚುವರಿ ಪಡೆ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಏಕಾಏಕಿ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.ತದನಂತರ ಒಂದು ಸಮುದಾಯದ ಧಾರ್ಮಿಕ ಮುಖಂಡರು ಹಾಗೂ ಪೊಲೀಸರು ಪ್ರತಿಭಟನಾನಿರತರನ್ನು ಸಂತೈಸುವಲ್ಲಿ ಮುಂದಾದರಾದರೂ ಇವರ ಮಾತಿಗೆ ಕಿವಿಗೊಡದೆ ಅವರೊಂದಿಗೂ ವಾಗ್ವಾದಕ್ಕಿಳಿದು ಪ್ರತಿಭಟನೆಗೆ ಮುಂದಾಗಿದ್ದರಿಂದ ಪರಿಸ್ಥಿತಿ ತಾರಕಕ್ಕೇರಿತು.ಈ ವೇಳೆ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಆಕೋಶಭರಿತ ಗುಂಪನ್ನು ಚದುರಿಸಲಾಯಿತು.
ಸದ್ಯ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.ಸದ್ಯ ಪರಿಸ್ಥಿತಿ ಶಾಂತವಾಗಿದ್ದು ಕಲ್ಲು ತೂರಾಟ ನಡೆಸಿದವರ ಪತ್ತೆ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯ :
ಪೊಲೀಸ್ ಠಾಣೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿಗಳ ಮೊರೆ ಹೋಗಿದ್ದಾರೆ. ತಡರಾತ್ರಿ ಏಕಾಏಕಿ ಠಾಣೆ ಮುಂದೆ ಸಾವಿರಾರು ಮಂದಿ ಜಮಾಯಿಸಿ ಕಲ್ಲುತೂರಾಟ ನಡೆಸಿರುವವರ ಪತ್ತೆಗೆ ಠಾಣೆ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಗುರುತು ಪತ್ತೆ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ.
ಬಂಧನ :
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬಾತನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಬಗ್ಗೆ ಪೊಲೀಸರು ಅಧಿಕೃತ ಫೇಸ್ಬುಕ್ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಘಟನೆ ವಿವರ :
ಪ್ರಮುಖ ರಾಜಕೀಯ ಮುಖಂಡರುಗಳಾದ ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರಗಳನ್ನು ವಿವಸ್ತ್ರಗೊಳಿಸಿ, ತಲೆ ಮೇಲೆ ಒಂದು ಸಮುದಾಯದ ಟೋಪಿ ಇಟ್ಟು, ದೇಹದ ಮೇಲೆಲ್ಲಾ ಅನ್ಯಧರ್ಮದ ಭಾಷೆಯಲ್ಲಿ ಅವಹೇಳನಕಾರಿ ಪದಗಳನ್ನು ಬರೆದು ಸಾರ್ವಜನಿಕವಾಗಿ ಹಂಚಿಕೆ ಮಾಡಿರುವುದೇ ಒಂದು ಸಮುದಾಯ ಉದ್ವಿಗ್ನಗೊಳ್ಳಲು ಕಾರಣವಾಗಿದೆ.
ಪೋಸ್ಟರ್ ಕುರಿತು ನಿನ್ನೆ ರಾತ್ರಿ ಮಾಹಿತಿ ತಿಳಿದ ಅನ್ಯಕೋಮಿನ ಸಮುದಾಯದ ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತೆಡೆದು ಪ್ರತಿಭಟನೆಗೆ ಮುಂದಾದರು.
ಈ ವೇಳೆ ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿತಲ್ಲದೆ, ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.
ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಕೂಡಲೇ ಹೆಚ್ಚುವರಿ ಪಡೆ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಏಕಾಏಕಿ ಪೊಲೀಸರ ಮೇಲೆ ಹಾಗೂ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಈ ವೇಳೆ ಹಲವು ಪೊಲೀಸರು ಗಾಯಗೊಂಡರು. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಕಂಡ ಪೊಲೀಸರು ತಕ್ಷಣ ಲಾಠಿ ಪ್ರಹಾರ ಮಾಡಿದರಲ್ಲದೆ, ಆಶ್ರವಾಯು ಸಿಡಿಸಿ ಗುಂಪುಗೂಡಿದವರನ್ನು ಚದುರಿಸಿದರು.
ತದನಂತರ ಒಂದು ಸಮುದಾಯದ ಧಾರ್ಮಿಕ ಮುಖಂಡರು ಹಾಗೂ ಪೊಲೀಸರು ಪ್ರತಿಭಟನಾನಿರತರನ್ನು ಸಂತೈಸುವಲ್ಲಿ ಮುಂದಾದರಾದರೂ ಅವರೊಂದಿಗೂ ಇವರ ಮಾತಿಗೆ ಕಿವಿಗೊಡದೆ ವಾಗ್ವಾದಕ್ಕಿಳಿದು ಪ್ರತಿಭಟನೆಗೆ ಮುಂದಾಗಿದ್ದರಿಂದ ಪರಿಸ್ಥಿತಿ ಮತ್ತಷ್ಟು ತಾರಕಕ್ಕೇರಿತು.
ಈ ವೇಳೆ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಆಕೋಶಭರಿತ ಗುಂಪನ್ನು ಚದುರಿಸಲಾಯಿತು.ಸದ್ಯ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.ಪೊಲೀಸ್ ಇಲಾಖೆಯ ಹಿರಿಯ ಉನ್ನತಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.