Thursday, April 16, 2026
Homeರಾಷ್ಟ್ರೀಯ'ಜನರ ನಾಯಕ': ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

‘ಜನರ ನಾಯಕ’: ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

'A leader of the people': PM Modi condoles Ajit Pawar's death

ನವದೆಹಲಿ, ಜ. 28- ಇಂದು ಬೆಳಿಗ್ಗೆ ಬಾರಾಮತಿಯಲ್ಲಿ ತಮ್ಮ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಕಾಲಿಕ ನಿಧನದಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

66 ವರ್ಷದ ಅಜಿತ್‌ ಪವಾರ್‌ ಅವರು ಜನರ ನಾಯಕ ಮತ್ತು ಅವರು ಬಲವಾದ ತಳಮಟ್ಟದ ಸಂಪರ್ಕವನ್ನು ಹೊಂದಿದ್ದರು ಎಂದು ಮೋದಿ ಎಕ್ಸ್ ಮಾಡಿದ್ದಾರೆ. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದ ಕಠಿಣ ಪರಿಶ್ರಮಿ ವ್ಯಕ್ತಿತ್ವ ಎಂದು ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದರು.

ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ, ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಯ ತಮ್ಮ ತವರು ಪ್ರದೇಶಕ್ಕೆ ಅಜಿತ್‌ ಪವಾರ್‌ ಅವರನ್ನು ಕರೆದೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ನಂತರ ಅವರು ಸಾವನ್ನಪ್ಪಿದರು. ಅಪಘಾತದಲ್ಲಿ ಇತರ ನಾಲ್ವರು ಸಹ ಸಾವನ್ನಪ್ಪಿದ್ದಾರೆ.

ಖಾಸಗಿ ಕಂಪನಿಯಾದ ವಿಎಸ್‌‍ಆರ್‌ ವೆಂಚರ್ಸ್‌ ನಿರ್ವಹಿಸುತ್ತಿದ್ದ ಲಿಯರ್‌ಜೆಟ್‌‍ 45 ವಿಮಾನ ಅಪಘಾತದ ನಂತರ ಬೆಂಕಿಗೆ ಆಹುತಿಯಾಯಿತು.ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹಿರಿಯ ಅಧಿಕಾರಿಯೊಬ್ಬರು, ವಿಮಾನದಲ್ಲಿ ಅಜಿತ್‌ ಪವಾರ್‌, ಅವರ ಪಿಎಸ್‌‍ಒ ಮತ್ತು ಸಹಾಯಕ ಮತ್ತು ಇಬ್ಬರು ಸಿಬ್ಬಂದಿ (ಪೈಲಟ್‌ ಇನ್‌ ಕಮಾಂಡ್‌ ಮತ್ತು ಮೊದಲ ಅಧಿಕಾರಿ) ಸೇರಿದಂತೆ ಐದು ಪ್ರಯಾಣಿಕರಿದ್ದರು ಎಂದು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಂಚಿತವಾಗಿ ಪವಾರ್‌ ಬಾರಾಮತಿಯಲ್ಲಿ ನಾಲ್ಕು ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಲಾಗಿತ್ತು.

RELATED ARTICLES

Latest News