Tuesday, February 25, 2025
Homeಬೆಂಗಳೂರು1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ

1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ

Target to vaccinate 1.84 lakh stray dogs in the BBMP Area

ಬೆಂಗಳೂರು,ಫೆ. 14- ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ ಸಂಯುಕ್ತ ಲಸಿಕೆ ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆ ಕೇಂದ್ರ ಕಛೇರಿ ಆವರಣದಲ್ಲಿ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಇಡೀ ದೇಶದಲ್ಲಿಯೇ ಮೊದಲಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ನೀಡಲಾಗುತ್ತಿದೆ.

1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ಇದ್ದು, ವ್ಯಾಕ್ಸಿನ್‌ ಮತ್ತು ಕೋಲ್‌್ಡ ಸ್ಟೋರೇಜ್‌ ಗಾಗಿ 4.98 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು. ಪಶುಪಾಲನಾ ವಿಭಾಗ ಬಿಬಿಎಂಪಿ ವತಿಯಿಂದ ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿನಾಯಿಗಳಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ರೇಬೀಸ್‌‍ ರೋಗ ನಿರೋಧಕ ಲಸಿಕೆಯನ್ನುಯಶಸ್ವಿಯಾಗಿ ನಿಯಮಾನುಸಾರ ನಿರ್ವಹಿಸಲಾಗುತ್ತಿರುತ್ತದೆ.

ರೇಬೀಸ್‌‍ ಲಸಿಕೆ ಹೊರತು ಪಡಿಸಿ ಬೀದಿನಾಯಿಗಳಲ್ಲಿ ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳನ್ನು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮವನ್ನು ನಿರ್ವಹಿಸುವುದು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತ್ಯಗತ್ಯವಾಗಿರುತ್ತದೆ ಎಂದರು.

ಬೀದಿನಾಯಿಗಳಿಗೆ ಮಾರಕವಾಗಿರುವ ರೋಗಗಳಲ್ಲಿ ಐದು ರೋಗಗಳು ತುಂಬಾ ಮಾರಕವಾಗಿರುತ್ತದೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು 5 ರೋಗಗಳಿಗೆ ಈ ಸಂಯುಕ್ತ ಲಸಿಕೆಯು ಅತ್ಯವಶ್ಯಕವಾಗಿರುತ್ತದೆ ಎಂದು ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವಂತಹ ನಾಗರಿಕರ ಆರೋಗ್ಯ ಕಾಪಾಡುವುದು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ. ಇದೇ ರೀತಿ ಪಾಲಿಕೆ ವ್ಯಾಪ್ತಿಯ ಬೀದಿನಾಯಿಗಳ ಆರೋಗ್ಯ ಕಾಪಾಡವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಬೀದಿನಾಯಿಗಳಲ್ಲಿ ಕಾಣಿಸಿಕೊಳ್ಳುವಂತಹ ಮಾರಕ ರೋಗಗಳ ವಿರುದ್ಧ ಲಸಿಕೆ ಹಾಕುವುದರಿಂದ ಈ ಮಾರಕ ರೋಗಗಳ ಹರಡುವಿಕೆ ಹಾಗು ತಡೆಗಟ್ಟುವಲ್ಲಿ ಸಂಯುಕ್ತ ಲಸಿಕೆ ಕಾರ್ಯಕ್ರಮವು ಉಪಯುಕ್ತವಾಗಲಿದೆ ಎಂದರು.

ಈ ವೇಳೆ ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್‌ ವಿಕಾಸ್‌‍ ಕಿಶೋರ್‌, ಯಲಹಂಕ ವಲಯ ಆಯುಕ್ತರಾದ ಕರೀಗೌಡ, ಜಂಟಿ ನಿರ್ದೇಶಕರಾದ ಡಾ. ಚಂದ್ರಯ್ಯ, ಎಲ್ಲಾ ವಲಯಗಳ ಸಹಾಯಕ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News