ಪಾಲಕ್ಕಾಡ್,ಫೆ.16-ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡು ಎಚ್ಚತ್ತ ಸಿಬ್ಬಂದಿ ಕೂಡಲೆ ಆಗ್ನಿ ಹಿನ್ನಲೆಯಲ್ಲಿ ದೊಡ್ಡ ಅನಾಹುತ ತಪ್ಪಿದೆ. ಇಲ್ಲಿನ ಜಿಲ್ಲಾ ಆಸ್ಪತ್ರೆಯ ಮಹಿಳಾ ವಾರ್ಡ್ ಪಕ್ಕದಲ್ಲಿರುವ ನರ್ಸ್‌ಗಳ ಡ್ರೆಸ್ ಬದಲಾಯಿಸುವ ಕೊಠಡಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರುಪೊಲೀಸರು ತಿಳಿಸಿದ್ದಾರೆ.
ಕೆಲವು ಔಷಧಗಳನ್ನು ಸಂಗ್ರಹಿಸಿಟ್ಟ ಕೊಠಡಿಯೊಳಗೆ ಹೊಗೆ ಕಾಣಿಸಿಕೊಂಡಿದ್ದರಿಂದ ಅಕ್ಕಪಕ್ಕದ ವಾರ್ಡ್‌ಗಳಲ್ಲಿದ್ದ ರೋಗಿಗಳನ್ನು ಕೂಡಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.
ಎಲ್ಲರೂ ಸುರಕ್ಷಿತವಾಗಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಪ್ರಾಥಮಿಕ ಊಹೆಯ ಪ್ರಕಾರ, ಹಠಾತ್ ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ಧಾವಿಸಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದರು ಎಂದು ಅವರು ಹೇಳಿದರು.