Tuesday, February 25, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗಮಾಯ, 19.30 ಲಕ್ಷ ಕಳೆದುಕೊಂಡ ನಿವೃತ್ತ ನೌಕರ

ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗಮಾಯ, 19.30 ಲಕ್ಷ ಕಳೆದುಕೊಂಡ ನಿವೃತ್ತ ನೌಕರ

bank Accounts hacked : retired employee loses Rs 19.30 lakh

ಮೈಸೂರು, ಫೆ16- ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ.

ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ ರವರ ಖಾತೆ ವಿವರವನ್ನು ಹ್ಯಾಕ್ ಮಾಡಿರಬಹುದೆಂದು ಶಂಕಿಸಲಾಗಿದೆ.

ಕೇವಲ ಒಂದೇ ಗಂಟೆ ಅವಧಿಯಲ್ಲಿ ಖಾತೆಯಲ್ಲಿದ್ದ ಹಣ ಮಾಯವಾಗಿದೆ. ಹಣ ಕಳೆದುಕೊಂಡ ಮುರುಗೇಶ್ ಮೈಸೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

RELATED ARTICLES

Latest News