Monday, February 24, 2025
Homeರಾಷ್ಟ್ರೀಯ | Nationalವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

Student raped by teacher

ಅಹಮದಾಬಾದ್, ಫೆ.19- ಶಾಲೆಯಲ್ಲಿ ಅದ್ಭುತ ಭಾಷಣಗಾರ್ತಿಯಾಗಿದ್ದ ವಿದ್ಯಾರ್ಥಿನಿ ಮೇಲೆ ಶಿಕ್ಷಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆ ಬಗ್ಗೆ ಹತ್ತನೇ ತರಗತಿ ವಿದ್ಯಾರ್ಥಿನಿ ಅದ್ಭುತ ಭಾಷಣ ಮಾಡಿದ್ದಳು. ಶಾಲೆಯಲ್ಲಿ ನೆರೆದಿದ್ದ ಎಲ್ಲರೂ ಆಕೆಯ ಭಾಷಣ ಕೇಳಿ ಬೆರಗಾಗಿ ಚಪ್ಪಾಳೆ ತಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಿಕ್ಷಕನೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಘಟನೆ ಗುಜರಾತ್‌ನ ಸಬರ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಭೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯ ಕುರಿತು ಭಾಷಣ ಮಾಡಿದ್ದಳು.

ಫೆಬ್ರವರಿ 7 ರಂದು ಆರೋಪಿ ಶಿಕ್ಷಕ ಆಕೆಯನ್ನು ಹುಟ್ಟುಹಬ್ಬದ ಪ್ರಯುಕ್ತ ಹೋಟೆಲ್‌ಗೆ ಕರೆದೊಯ್ದಿದ್ದ. ಆ ಹೋಟೆಲ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಆದರೆ ಬಾಲಕಿ ಧೈರ್ಯಗುಂದಲಿಲ್ಲ, ಆಕೆಯ ಶಾಲಾ ಪರೀಕ್ಷೆಗಳು ಫೆಬ್ರವರಿ ಅಂತ್ಯದಲ್ಲಿವೆ. ಬಾಲಕಿ ಪ್ರಸ್ತುತ ತನ್ನ ಅಧ್ಯಯನದತ್ತ ಗಮನ ಹರಿಸುತ್ತಿದ್ದಾಳೆ.

ಮಕ್ಕಳಿಗೆ ತಪ್ಪು-ಒಪ್ಪುಗಳ ಬಗ್ಗೆ ತಿಳಿವಳಿಕೆ ಹೇಳಬೇಕಾದವರೇ ಅಪರಾಧದಲ್ಲಿ ಭಾಗಿಯಾಗುತ್ತಿರುವುದು ಸಮಾಜದಲ್ಲಿ ಆತಂಕ ಸೃಷ್ಟಿಸಿದೆ. ಶಿಕ್ಷಕ ತನಗೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ. ಶಾಲಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಬಿಡುವುದಿಲ್ಲ ಎಂದು ಆತ ಬೆದರಿಕೆ ಹಾಕಿದ್ದಾನೆ. ಆದರೆ ಅವಳು ಪೊಲೀಸ್ ಅಧಿಕಾರಿಯಾಗಲು ಬಯಸುತ್ತಾಳೆ.

ವಿಜ್ಞಾನ ಮತ್ತು ಗಣಿತ ಅವಳ ನೆಚ್ಚಿನ ವಿಷಯಗಳಾಗಿವೆ. ಪ್ರಸ್ತುತ ಅವಳು ಕಷ್ಟಪಟ್ಟು ಅಧ್ಯಯನ ಮಾಡುವ ಮೂಲಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾಳೆ.

RELATED ARTICLES

Latest News