ನವದೆಹಲಿ, ಫೆ.19- ರಾಷ್ಟ್ರ ರಾಜಧಾನಿ ದೆಹಲಿಯ ಬಿಜೆಪಿ ಮುಖ್ಯಮಂತ್ರಿ ಆಯ್ಕೆ ಇಂದು ಸಂಜೆ ಫೈನಲ್ ಆಗುವ ಸಾಧ್ಯತೆಗಳಿವೆ. ಸುಮಾರು ಮೂರು ದಶಕಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯಿಂದ ಆಯ್ಕೆಯಾದ ಮೊದಲ ಮುಖ್ಯಮಂತ್ರಿ ಹೆಸರನ್ನು ಇಂದು ಸಂಜೆಯೊಳಗೆ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ವಿದೇಶ ಪ್ರವಾಸದಿಂದ ಹಿಂತಿರುಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿ ಸಿಎಂ ಆಯ್ಕೆ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಮೋದಿ ನೇತೃತ್ವದಲ್ಲಿ ದೆಹಲಿ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಶಾಸಕರು ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿರುವವರು ನಾಳೆ ಬೆಳಿಗ್ಗೆ 11 ಗಂಟೆಗೆ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನಲಾಗಿದೆ. ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ 50 ಚಲನಚಿತ್ರ ತಾರೆಯರು, ಕೈಗಾರಿಕೋದ್ಯಮಿಗಳು, ರಾಜತಾಂತ್ರಿಕರಿಗೆ ಆಹ್ವಾನನಗರದ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭವು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.34 ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣವಚನವು ಮಧ್ಯಾಹ್ನ 12.05 ಕ್ಕೆ ನಡೆಯಲಿದೆ.ಮೂರು ವೇದಿಕೆಗಳನ್ನು ಸ್ಥಾಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ – ಒಂದು ವೇದಿಕೆ ಪ್ರಧಾನಿ, ಗೃಹ ಸಚಿವ ಅಮಿತ್ ಶಾ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೆ ನಾ ಮತ್ತು ಹೊಸ ಮುಖ್ಯಮಂತ್ರಿ, ಎರಡನೆಯ ವೇದಿಕೆ ಆಹ್ವಾನಿತ ಧಾರ್ಮಿಕ ಮುಖಂಡರು ಮತ್ತು ಮೂರನೆಯ ವೇದಿಕೆ ಸಂಸದರು ಮತ್ತು ಶಾಸಕರಿಗೆ, ಅವರಲ್ಲಿ 200 ಕ್ಕೂ ಹೆಚ್ಚು ಬಿಜೆಪಿ ಮತ್ತು ಮಿತ್ರಪಕ್ಷಗಳ ಮುಖಂಡರುಗಳನ್ನು ಆಹ್ವಾನಿಸಲಾಗಿದೆ.