ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲಿನ ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಲೋಕಾಯುಕ್ತ ಮೈಸೂರು ಎಸ್.ಪಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದರಿಂದಾಗಿ ಸಿದ್ದರಾಮಯ್ಯ ಅವರ ಕುಟುಂಬ ನಿರಾಳವಾಗಿದೆ.
ಹೈಕೋರ್ಟ್ ನ ಏಕ ಸದಸ್ಯಪೀಠ ಸೂಚಿಸಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಎಸ್ ಪಿ ಅವರು ಇಂದು ಸಂಪೂರ್ಣ ವರದಿಯನ್ನು ಸಲ್ಲಿಸಿದ್ದು, ಅದರಲ್ಲಿ ಸಾಕ್ಷಾಧಾರದ ಕೊರತೆಯಿಂದ ಆರೋಪಗಳು ಸಾಬೀತಾಗಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿದೆ.
ರಾಜಕೀಯ ವಲಯದಲ್ಲಿ ಸಾಕಷ್ಟು ಮಾತಿನ ಸಮರಗಳೇ ನಡೆದಿತ್ತು. ಸಿಎಂ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿ, ಭಾರೀ ಪ್ರತಿಭಟನೆಯನ್ನೇ ನಡೆಸಿತ್ತು. ಇದು ದೇಶ ವ್ಯಾಪ್ತಿ ಸಾಕಷ್ಟು ಸುದ್ದಿಯಾಗಿತ್ತು. ಪ್ರಸ್ತುತ ನ್ಯಾಯಾಲಯಕ್ಕೆ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಸಿಎಂ ಗೆ ಕಾನೂನು ಹೋರಾಟದಲ್ಲಿ ಜಯ ಸಿಕ್ಕಂತಾಗಿದೆ.
ಪ್ರಸ್ತುತ ನ್ಯಾಯಾಲಯ ವರದಿಯ ಕುರಿತು ತೆಗೆದುಕೊಳ್ಳುವ ಕ್ರಮ ಮುಂದಿನ ರಾಜಕೀಯ ಬೆಳವಣಿಗೆಗಳು ನಡೆಯಲಿದೆ.ಲೋಕಾಯುಕ್ತ ವರದಿ ಸಲ್ಲಿಕೆಯಾದ ನಂತರ ಸಿದ್ದು ಬಣದಲ್ಲಿ ಸಂಭ್ರಮ ಮನೆ ಮಾಡಿದೆ.