Saturday, February 22, 2025
Homeರಾಷ್ಟ್ರೀಯ | Nationalಕಾಂಗ್ರೆಸ್ ಸಂಸದನ ಮೇಲೆ ಜನರ ಗುಂಪುನಿಂದ ಹಲ್ಲೆ

ಕಾಂಗ್ರೆಸ್ ಸಂಸದನ ಮೇಲೆ ಜನರ ಗುಂಪುನಿಂದ ಹಲ್ಲೆ

Mob assaults Congress MP in Assam, party demands action; Himanta Sarma responds

ನಾಗಾಂವ್, ಫೆ.21– ಕಾಂಗ್ರೆಸ್ ಸಂಸದ ಹಾಗೂ ಅವರ ಭದ್ರತಾ ಅಧಿಕಾರಿಗಳ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಅಸ್ಸಾಂನ ಧುಬ್ರಿ ಕ್ಷೇತ್ರದಲ್ಲಿ ನಡೆದಿದೆ. ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ (ಪಿಎಸ್‌ಒ) ಮೇಲೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಗುಂಪೊಂದು ಹಲ್ಲೆ ನಡೆಸಿದ್ದು, ಸಂಸದ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಗಾಯಗೊಂಡಿದ್ದಾರೆ.

ರುಪೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಣೋಮರಿ ಗ್ರಾಮದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸಂಸದ ಹುಸೇನ್ ಅವರ ಮೇಲೆ ಜನರ ಗುಂಪೊಂದು ಕ್ರಿಕೆಟ್ ಬ್ಯಾಟ್‌ಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿಕೋರರು ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿಕೊಂಡು ಸಂಸದರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಸಂಸದರ ವೈಯಕ್ತಿಕ ಭದ್ರತಾ ಅಧಿಕಾರಿಗಳು ಗುಂಡು ಹಾರಿಸುವ ಮೂಲಕ ಸಂಸದರನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ ಗುಂಪು ಅವರ ಮೇಲೂ ದಾಳಿ ಮಾಡಿತು.

ಹೆಚ್ಚುವರಿ ಪೊಲೀಸ್ ಪಡೆ ಸ್ಥಳಕ್ಕೆ ತಲುಪಿ ಗುಂಪನ್ನು ಚದುರಿಸಿ. ಸಂಸದರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು. ಅಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.ಈ ದಾಳಿಯ ನಂತರ, ದಾಳಿಯಲ್ಲಿ ಭಾಗಿಯಾಗಿರುವವರನ್ನು ತಕ್ಷಣ ಬಂಧಿಸಬೇಕೆಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.

ಏತನ್ಮಧ್ಯೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಿಲ್ಲೆಯಲ್ಲಿ ಪ್ರತಿಪಕ್ಷ ನಾಯಕನ ವಾಸ್ತವ್ಯದ ಸಮಯದಲ್ಲಿ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ದಾಳಿಯ ನಂತರ, ಪೊಲೀಸರು ಘಟನೆಯ ತನಿಖೆಯನ್ನು ಪ್ರಾರಂಭಿಸಿದ್ದಾರೆ.

RELATED ARTICLES

Latest News