Sunday, February 23, 2025
Homeಜಿಲ್ಲಾ ಸುದ್ದಿಗಳು | District Newsಬಳ್ಳಾರಿ : ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ದಂಪತಿ ಅನುಮಾನಾಸ್ಪದ ಸಾವು

ಬಳ್ಳಾರಿ : ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ದಂಪತಿ ಅನುಮಾನಾಸ್ಪದ ಸಾವು

Couple's suspicious death in Ballary

ಬಳ್ಳಾರಿ,ಫೆ.22- ಬಟ್ಟೆ ವ್ಯಾಪಾರಿ ದಂಪತಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ಗ್ಲಾಸ್ ಬಜಾರ್ ಪ್ರದೇಶದಲ್ಲಿ ವಾಸವಾಗಿದ್ದ ಶಂಕರ್ ರಾಮ್ (40) ಮತ್ತು ಶಾಂತಾದೇವಿ (34) ಮೃತಪಟ್ಟಿರುವ ದಂಪತಿ.

15 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸವಾಗಿದ್ದ ದಂಪತಿ ಅನ್ನೋನ್ಯವಾಗಿಯೇ ಇದ್ದರು. ಆಗಾಗ್ಗೆ ಸಣ್ಣಪುಟ್ಟ ಜಗಳ ಹೊರತುಪಡಿಸಿ ಬೇರೆ ಯಾವ ಸಮಸ್ಯೆಯೂ ಇರಲಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಬಳ್ಳಾರಿಯಲ್ಲಿ ಜೀನ್ಸ್ ಅಂಗಡಿ ಇಟ್ಟುಕೊಂಡಿದ್ದರು. ಈ ನಡುವೆ ದಂಪತಿ ಮಧ್ಯೆ ಏನಾಯಿತೋ, ಏನೋ ಗೊತ್ತಿಲ್ಲ. ಪತ್ನಿಯನ್ನು ಕೊಂದು ಶಂಕರ್ ರಾಮ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇಂದು ಬೆಳಗ್ಗೆ ಶಂಕರ್ ರಾಮ್ ಸಂಬಂಧಿ ಇವರ ಮನೆ ಬಳಿ ಬಂದಾಗ ಬಾಗಿಲು ತೆಗೆದಿಲ್ಲ. ಕಿಟಕಿ ಮೂಲಕ ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶಂಕರ್ ರಾಮ್ ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಬ್ರೂಸ್‌ಪೇಟೆ ಠಾಣೆ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಶಂಕರ್ ರಾಮ್ ಅವರ ಪತ್ನಿ ಸಹ ಮೃತಪಟ್ಟಿರುವುದು ಕಂಡುಬಂದಿದೆ. ಸ್ಟೀಲ್ ಫ್ಲಾಸ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿ ನಂತರ ಶಂಕರ್ ರಾಮ್ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News