ಬೆಂಗಳೂರು,ಫೆ.25- ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಾಲಹಳ್ಳಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್ ಎಂಟಿ ಕ್ಲಬ್ ಸಮೀಪ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ವಾಹನ ಚಲಾಯಿಸುತ್ತಿದ್ದ ವ್ಯಕ್ತಿ ರಸ್ತೆಬದಿ ಕಾರು ನಿಲ್ಲಿಸಿ ಹೊರಗೆ ಬಂದು ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರಾದರೂ ಶೇ.75ರಷ್ಟು ಸುಟ್ಟು ಹಾನಿಯಾಗಿದೆ.
ಕಾರಿನ ಬ್ಯಾಟರಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಜಾಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. |