Monday, April 21, 2025
Homeರಾಜ್ಯ'ಗ್ಯಾರಂಟಿ' ಹಣ ಹಾಕುವ ದಿನಾಂಕ ಮೊದಲೇ ಘೋಷಣೆ ಮಾಡಿ : ನಿಖಿಲ್

‘ಗ್ಯಾರಂಟಿ’ ಹಣ ಹಾಕುವ ದಿನಾಂಕ ಮೊದಲೇ ಘೋಷಣೆ ಮಾಡಿ : ನಿಖಿಲ್

Announce the date for depositing 'guarantee' money in advance: Nikhil

ಬೆಂಗಳೂರು, ಫೆ.26-ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ.

ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ ಮ್ಯಾಜಿಕ್ ಆಗಿ ಹಣ ಜಮವಾಗುತ್ತದೆ ಎಂದು ಅವರು ಟೀಕಿಸಿದ್ದಾರೆ.

ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಭಾರತದ ಸಿಲಿಕಾನ್ ರಾಜಧಾನಿ ಬೆಂಗಳೂರು. ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ ಡಿಬಿಟಿ ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

RELATED ARTICLES

Latest News