Wednesday, February 26, 2025
Homeರಾಜ್ಯಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

Free bus service for SSLC, II PUC students to write exams

ಬೆಂಗಳೂರು, ಫೆ.25-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಲಿವೆ.

ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಅದೇ ರೀತಿ ಬಿಎಂಟಿಸಿ ಬಸ್‌ ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಸಲು ಅವಕಾಶ ಕಲ್ಪಿಸಲಾಗಿದೆ. ಈ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20 ರವರೆಗೆ ಹಾಗೂ ಎಸ್‌ಎಸ್‌ಎಲ್‌ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ ಏ.4 ರವರೆಗೆ ನಡೆಯಲಿವೆ.

RELATED ARTICLES

Latest News