Wednesday, February 26, 2025
Homeರಾಜ್ಯಬಿಟ್ ಕಾಯಿನ್ ಹಗರಣ : ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ

ಬಿಟ್ ಕಾಯಿನ್ ಹಗರಣ : ಬೆಂಗಳೂರು ಸೇರಿ 60 ಕಡೆ ಸಿಬಿಐ ದಾಳಿ

Bitcoin Scam: CBI raids 60 places including Bangalore

ನವದೆಹಲಿ/ಬೆಂಗಳೂರು,ಫೆ.26-ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಢ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಬಿಟ್ ಕಾಯಿನ್‌, ಕ್ರಿಪ್ರೋ ಕರೆನ್ಸಿ ಹಗರಣ ಸಂಬಂಧ ಹಲವೆಡೆ ಎಫ್‌ಐಆರ್ ದಾಖಲಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು. ಬಳಿಕ ಸುಪ್ರೀಂಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ದೊಡ್ಡ ಮಟ್ಟದ ವಂಚನೆ ಹಾಗೂ ಮನಿ ಲಾಂಡರಿಂಗ್ ಹಿನ್ನೆಲೆಯಲ್ಲಿ ಹಗರಣ ಸಂಬಂಧ ಸಿಬಿಐ ತನಿಖೆ ಕೈಗೊಂಡಿತ್ತು. ಈ ಸಂಬಂಧ ಮಂಗಳವಾರ ಬೆಂಗಳೂರು ಸೇರಿ 60 ಕಡೆಗಳಲ್ಲಿ ದಾಳಿ ನಡೆಸಿದೆ.

ಗೇನ್ ಬಿಟ್ ಕಾಯಿನ್ ಕ್ರಿಪ್ರೊ ಕರೆನ್ಸಿ ಹಗರಣಕ್ಕೆ ಸಂಬಂಧಿಸಿ ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್. ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಕ್ರಿಪ್ರೊ ವ್ಯಾಲೆಟ್ಸ್, ಡಿಜಿಟಲ್ ಸಾಕ್ಷ್ಯಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಇಮೇಲ್, ಕೌಡ್‌ಗಳಲ್ಲಿ ಇರುವ ಮಾಹಿತಿಗಳನ್ನು ಸಿಬಿಐ ಪಡೆದುಕೊಂಡಿದೆ.

ಪ್ರಕರಣ ಹಿನ್ನೆಲೆ:
ಅಮಿತ್ ಭಾರದ್ವಾಜ್ ಮತ್ತು ಅಜಯ್ ಭಾರದ್ವಾಜ್ ಸೋದರರು ಗೇನ್ ಬಿಟ್ ಕಾಯಿನ್ ಜಾಲತಾಣ ಮೂಲಕ 2015ರಲ್ಲಿ ಪ್ರತಿ ತಿಂಗಳು ಶೇ.10ರಷ್ಟು ಲಾಭ ಮಾಡಿಕೊಡುವುದಾಗಿ ಜನರಿಂದ ಹೂಡಿಕೆ ಮಾಡಿಸಿಕೊಂಡಿದ್ದರು. ಆರಂಭದಲ್ಲಿ ಹೂಡಿಕೆದಾರರಿಗೆ ಲಾಭಾಂಶ ನೀಡಲಾಗುತ್ತಿತ್ತು. ಆನಂತರದ ದಿನಗಳಲ್ಲಿ ಲಾಭಾಂಶ ನೀಡಲು ಸಾಧ್ಯವಾಗದಿದ್ದರಿಂದ ಹೂಡಿಕೆದಾರರಿಗೆ ನಷ್ಟ ಉಂಟಾಯಿತು ದೇಶಾದ್ಯಂತ ಈ ಕಂಪನಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಸುಪ್ರೀಂಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಅಮಿತ್ ಭಾರದ್ವಾಜ್ (ಈಗ ಮೃತ) ಮತ್ತು ಅವರ ಸಹೋದರ ಅಜಯ್ ಭಾರದ್ವಾಜ್ ಅವರ ಮಾಸ್ಟರ್ ಮೈಂಡ್ ಎಂದು ಹೇಳಲಾಗುವ ಈ ಹಗರಣವನ್ನು ಆನ್ ಲೈನ್ ವೇದಿಕೆಗಳ ಮೂಲಕ ನಡೆಸಲಾಗುತ್ತಿದೆ. ಇದನ್ನು 2015 ರಲ್ಲಿ ವೇರಿಯೇಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಪ್ರಾರಂಭಿಸಲಾಯಿತು.

ಈ ಯೋಜನೆ ಹೂಡಿಕೆದಾರರಿಗೆ 18 ತಿಂಗಳುಗಳಲ್ಲಿ ಬಿಟ್ ಕಾಯಿನ್‌ನಲ್ಲಿ ಶೇ.10 ಮಾಸಿಕ ಆದಾಯದ ಭರವಸೆ ನೀಡಿತ್ತು. ಆ ನಷ್ಟವನ್ನು ಮರೆಮಾಚಲು, ಈ ಯೋಜನೆ, ಪಾವತಿಯನ್ನು ಕಡಿಮೆ ಮೌಲ್ಯದ ಕ್ರಿಪ್ಲೋ ಕರೆನ್ಸಿಯಾದ ಎಂಸಿಎಪಿಗೆ ಬದಲಾಯಿಸಿತು. ಅದರ ಪ್ರಮಾಣ ಮತ್ತು ಜಾಗತಿಕ ಸಂಪರ್ಕಗಳಿಂದಾಗಿ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ತನಿಖೆಗೆ ಸಿಬಿಐಗೆ ವರ್ಗಾಯಿಸಿತ್ತು. ತನಿಖಾಧಿಕಾರಿಗಳು, ದುರುಪಯೋಗಪಡಿಸಿಕೊಂಡ ಹಣ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ.

RELATED ARTICLES

Latest News