Friday, February 28, 2025
Homeರಾಷ್ಟ್ರೀಯ | Nationalಪವನ್ ಕಲ್ಯಾಣ್ ವಿರೋಧಿಗಳಿಗೆ 'ಜೈಲು ಭಾಗ್ಯ'

ಪವನ್ ಕಲ್ಯಾಣ್ ವಿರೋಧಿಗಳಿಗೆ ‘ಜೈಲು ಭಾಗ್ಯ’

Pawan Kalyan's opponents in Trouble

ಹೈದರಾಬಾದ್, ಫೆ.27– ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಇತರೆ ಕೆಲ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ತೆಲುಗಿನ ಖ್ಯಾತ ಹಾಸ್ಯನಟ ಪೋಸಾನಿ ಕೃಷ್ಣ ಮುರಳಿಯನ್ನು ಪೊಲೀಸರು ಬಂಧಿಸಿದ್ದಾರೆ..

ಪೋಸಾನಿ ಕೃಷ್ಣ ಮುರಳಿ ಅವರು ತೆಲುಗು ಚಿತ್ರರಂಗದ ಜನಪ್ರಿಯ ನಟರಾಗಿರುವ ಜೊತೆಗೆ ವೈಸಿಆರ್ ಪಕ್ಷದ ಮುಖಂಡರೂ ಆಗಿದ್ದಾರೆ. ಕೃಷ್ಣ ಮುರಳಿಯನ್ನು ಪವನ್ ಕಲ್ಯಾಣ್ ಸೇರಿದಂತೆ ಇತರೆ ಕೆಲ ನಾಯಕರ ಬಗ್ಗೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ.

ಪೋಸಾನಿ ಕೃಷ್ಣ ಮುರಳಿ ಈ ಹಿಂದೆ ಹಲವು ಬಾರಿ ನಟ ಪವನ್ ಕಲ್ಯಾಣ್ ಬಗ್ಗೆ ಅತ್ಯಂತ ಕೆಟ್ಟದಾಗಿ ಮಾತನಾಡಿದ್ದರು. ಪವನ್ ಕಲ್ಯಾಣ್ ಪತ್ನಿಯ ಬಗ್ಗೆಯೂ ಅವರು ಅಪಹಾಸ್ಯ ಮಾಡಿದ್ದರು. ಪವನ್ ಕಲ್ಯಾಣ್ ಪತ್ನಿಗೆ ಕೆಲಸದವರ ಜೊತೆ ಅಕ್ರಮ ಸಂಬಂಧ ಇದೆ, ಆಕೆ ವೇಶ್ಯ ಎಂದೆಲ್ಲ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಮುರಳಿ ಮಾತನಾಡಿದ್ದರು.

ಆಗೆಲ್ಲ ಜನಸೇನಾ ಕಾರ್ಯಕರ್ತರು ಮುರಳಿ ವಿರುದ್ಧ ದಾಳಿಗಳನ್ನು ಸಹ ಮಾಡಿದ್ದರು. ಇತ್ತೀಚೆಗೆ ಅವರು ಪವನ್ ಕಲ್ಯಾಣ್ ವಿರುದ್ಧ ವಾಗ್ದಾಳಿ ಮಾಡಿದ್ದರು ಎನ್ನಲಾಗುತ್ತಿದೆ.
ಹೈದರಾಬಾದ್‌ನ ಯೆಲ್ಲರೆಡ್ಡಿ ಗುಡಾನಲ್ಲಿನ ನ್ಯೂ ಸೈನ್ಸ್ ಕಾಲೊನಿಯಲ್ಲಿ ವಾಸವಿರುವ ಮುರಳಿ ಮನೆಗೆ ನಿನ್ನೆ ರಾತ್ರಿ ದಾಳಿ ನಡೆಸಿದ ಅನ್ನಮಯ ಜಿಲ್ಲೆ ಎಸ್‌ಪಿ ಬಿ ಕೃಷ್ಣ ರಾವ್ ನೇತೃತ್ವದ ಪೊಲೀಸ್ ತಂಡ ಮುರಳಿಯವರನ್ನು ಬಂಧಿಸಿದೆ.

ಈ ವೇಳೆ ನಟ ಮುರಳಿ, ಪೊಲೀಸರೊಟ್ಟಿಗೆ ವಾಗ್ವಾದ ಸಹ ಮಾಡಿದ್ದಾರೆ. ನಾನು ಬರುವುದಿಲ್ಲ, ನನಗೆ ಅಪರೇಷನ್ ಆಗಿದೆ. ಚಿಕಿತ್ಸೆ ಪಡೆದುಕೊಂಡು ಬರುತ್ತೇನೆ ಎಂದರು ಕೇಳದೆ ಅವರನ್ನು ಬಂಧಿಸಲಾಗಿದೆ.

ಮುರಳಿಯವರ ಮೇಲೆ ಬಿಎನ್ಎಸ್ ಸೆಕ್ಷನ್ 196, 111, ಬಿಎನ್‌ಎಸ್‌ಎಸ್ 47 (1), (2) ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿಯ ಮೇಲಿನ ಆರೋಪಗಳು ಜಾಮೀನುರಹಿತವಾಗಿದ್ದು, ಆರೋಪಿಯನ್ನು ರಾಜಂಪೇಟೆಯ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗುವುದು.

ಕೆಲ ದಿನಗಳ ಹಿಂದಷ್ಟೆ ಗನ್ನವರಂ ಮಾಜಿ ಶಾಸಕ, ವೈಎಸ್‌ಆರ್‌ಸಿ ಪಕ್ಷದ ಮುಖಂಡ ವಲ್ಲಭನೇನಿ ವಂಶಿಯನ್ನು ಬಂಧಿಸಲಾಗಿತ್ತು. ಈ ವ್ಯಕ್ತಿ ಸಹ ಚುನಾವಣೆಗೆ ಮುಂಚೆ ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು ಹಾಗೂ ಇತರೆ ಕೆಲವು ಟಿಡಿಪಿ ನಾಯಕರ ವಿರುದ್ಧ ಅತ್ಯಂತ ಕೀಳು ಭಾಷೆಗಳನ್ನು ಬಳಸಿ ಬೆದರಿಕೆ ಒಡ್ಡಿದ್ದ.

ಚುನಾವಣೆ ಪ್ರಚಾರದ ಸಮಯದಲ್ಲಿ ಮಾತನಾಡಿದ್ದ ಪವನ್ ಕಲ್ಯಾಣ್, ಇಂದು ಯಾರು ಯಾರು ನನ್ನ ಬಗ್ಗೆ, ನನ್ನ ಕುಟುಂಬದ ಬಗ್ಗೆ ಗೆಳೆಯರ ಬಗ್ಗೆ ಮಾತನಾಡುತ್ತಿದ್ದೀರೋ ನನಗೆ ಗೊತ್ತಿದೆ. ಅವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಎಚ್ಚರಿಕೆ ನೀಡಿದ್ದರು. ಅಂತೆಯೇ ಇದೀಗ ಒಬ್ಬೊಬ್ಬರಾಗಿ ಪೊಲೀಸರ ಅತಿಥಿಗಳಾಗುತ್ತಿದ್ದಾರೆ. ಮಾಜಿ ಶಾಸಕ ಕೊಡಲಿ ನಾನಿ, ನಟಿ ರೋಜಾ ಇನ್ನೂ ಕೆಲವರ ಬಂಧನ ಸಹ ಆಗುವ ಸಾಧ್ಯತೆ ಇದೆ.

RELATED ARTICLES

Latest News